ಬಾಲ್ಯ ವಿವಾಹ ತಡೆಗೆ ಸಹಕಾರ ನೀಡಲು ಕರೆ

0
211

ಹಾಸನ ಆ.25 : ಬಾಲ್ಯ ವಿವಾಹಗಳ ತಡೆಗಟ್ಟವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ಅಗತ್ಯವಾಗಿದ್ದು ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ,ತಹಸೀಲ್ದಾರ್ , ಮಕ್ಕಳ ರಕ್ಷಣಾ ಘಟಕ, ಸಿಡಿಪಿಓ ಅಥವಾ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ಸಾರ್ವಜನಿಕರು ಮಾಹಿತಿ ನೀಡುವಂತೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ತಿಳಿಸಿದ್ದಾರೆ .

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಸಮಗ್ರ ಮಕ್ಕಳ ರಕ್ಷಣಾ ಘಟಕ ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ಏರ್ಪಡಿಸಲಾಗಿದ್ದ ಮಕ್ಕಳ ಸಂರಕ್ಷಣೆ ಕುರಿತ ಅರಿವು – ನೆರವು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಾಲ್ಯ ಗಳು ಬಾಲ್ಯ ವಿವಾಹಗಳು ಹೆಚ್ಚಾಗುತ್ತಿರುವುದರಿಂದ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬಾಲ್ಯವಿವಾಹಕ್ಕೆ ಪ್ರೋತ್ಸಾಹಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಒಂದು ಲಕ್ಷ ದಂಡವನ್ನು ವಿಧಿಸಲಾಗುತ್ತದೆ ಸಾರ್ವಜನಿಕರು ಪ್ರೋತ್ಸಾಹ ನೀಡಬಾರದು ಹೆಚ್ಚು ಪ್ರಕರಣಗಳು ವರದಿಯಾಗಿರುವ ಗ್ರಾಮಗಳು ಹಾಗೂ ತಾಲ್ಲೂಕುಗಳಿಗೆ ಈ ವಾಹನ ಭೇಟಿ ನೀಡಿ ಅರಿವು ಮೂಡಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ರವಿಕಾಂತ್ ಅವರು ಮಾತನಾಡಿ ಬಾಲ್ಯ ವಿವಾಹ ಸಾಮಾಜಿಕ ಪಿಡುಗಾಗಿದ್ದು ಸಮಾಜಕ್ಕೆ ಮಾರಕವಾಗಿದೆ ಹಾಗೂ ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸಾರ್ವಜನಿಕರು ಎಚ್ಚರಿಕೆವಹಿಸುವಂತೆ ಎಂದರು
ಬಾಲಕಾರ್ಮಿಕ ಹಾಗೂ ಬಾಲ್ಯ ವಿವಾಹ ಪದ್ಧತಿ ಸಂಪೂರ್ಣವಾಗಿ ನಿಷೇಧವಾಗಬೇಕು ಇದಕ್ಕೆ ಜನ ಸಾಮಾನ್ಯರ ಸಹಕಾರ ಅಗತ್ಯವಾಗಿದೆ .ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯಲು ಪೋಕ್ಸೋ ಕಾಯ್ದೆ ಹಾಗೂ ಮಕ್ಕಳಿಗಾಗಿ ವಿಶೇಷ ನ್ಯಾಯಾಲಯವು ಸಹ ಇದೆ ಈ ಕಾಯ್ದೆಯು ಕಠಿಣವಾಗಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ಈ ಜಾಥವು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಂಚಾರಿಸಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.
ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪರ್ದೇಶಕರಾದ ಪರುಶುರಾಮ್ ಶಟಪ್ಪನವರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಷಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಕೋಮಲ, ಸದಸ್ಯರಾದ ವಿ. ಗೀತಾ ಹಾಗೂ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here