ಬ್ಲಾಕ್ ಸ್ಪಾಟ್ ಗಳನ್ನೂ ವೈಜ್ಞಾನಿಕವಾಗಿ ಸರಿಪಡಿಸಲು ಸೂಚನೆ

0
90

ಹಾಸನ ಆ.25 – ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ರಸ್ತೆ ಅಪಘಾತಗಳನ್ನೂ ನಿಯಂತ್ರಿಸಲು ಈ ಹಿಂದೆ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್ ಗಳನ್ನೂ ವೈಜ್ಞಾನಿಕವಾಗಿ ಸರಿಪಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದ ಮಾತನಾಡಿದ ಅವರು ಹಿಂದೆ ಗುರುತಿಸುವ ಬ್ಲಾಕ್‍ಸ್ಪಾಟ್‍ಗಳನ್ನು ಹೊರತುಪಡಿಸಿ ಹೊಸದಾಗಿ ಹೆಚ್ಚು ಅಪಘಾತಗಳು ಸಂಭವಿಸುಟ್ಟಿರುವ ಸ್ಥಳಗಳನ್ನು ಗುರುತಿಸಿ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತ ಸ್ಥಳಗಳನ್ನು ಪರಿಶೀಲಿಸಿ ಕ್ರಮ ವಹಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಅವರು ಸೂಚಿಸಿದರು

ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಅಪಘಾತವಾಗುವ ಸ್ಥಳಗಳನ್ನು ಗುರುತಿಸಲು ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಬೇಕು ಎಂದರು.

ಹಾಸನ ನಗರದ ತಹಶೀಲ್ದಾರ್ ಕಚೇರಿಯ ಬಳಿ ಇರುವ ಪ್ರತಿಮೆಯಿಂದ ಹೆಚ್ಚು ವಾಹನ ಸಂಚಾರಕ್ಕೆ ತೋದರೆಯಾಗುತ್ತಿರುವುದರಿಂದ ರಸ್ತೆಯ ಮಧ್ಯಕ್ಕೆ ಸ್ಥಳಾಂತರಿಸಿ ವೃತ್ತ ನಿರ್ಮಾಣ ಮಾಡಲು ಕ್ರಮವಹಿಸಲು ನಗರಸಭೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ವಾಹನಗಳ ನಿಲ್ದಾಣಕ್ಕೆ ಅನುಕೂಲವಾಗುವಂತೆ ಟ್ರಕ್ ಟರ್ಮಿನಲ್ ನಿರ್ಮಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ತಹಸೀಲ್ದಾರ್ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಅವರು ಮಾತನಾಡಿ ನಗರ ವ್ಯಾಪ್ತಿಯಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ ನಿಲುಗಡೆ ಸ್ಥಳ ಗುರುತಿಸಲು ಸರ್ವೇ ಕಾರ್ಯ ನಡೆಸುತ್ತಿದ್ದು ವರದಿ ಶೀಘ್ರದಲ್ಲೆ ಜಿಲ್ಲಾಡಳಿತಕ್ಕೆ ಸಲ್ಲಿಸುವುದಾಗಿ ತಿಳಿಸಿದರು.

ಹೆದ್ದಾರಿಗಳಲ್ಲಿ ಹೆಚ್ಚಿನ ಹೈವೇ ಪೋಟ್ರಲ್‍ಗಳನ್ನು ನಿಯೋಜಿಸಿಕೊಳ್ಳುವಂತೆ ಹಾಗೂ ಸೂಚನಾ ಫಲಕಗಳನ್ನು ಹೆಚ್ಚು ಅಳವಡಿಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್ ,ಪ್ರಾದೇಶಿಕ ಸಾರಿಗೆ ಅಧಿಕಾರಿ ನಾರಾಯಣ ಸ್ವಾಮಿ ನಾಯಕ್ , ಲೋಕೋಪಯೋಗಿ ಇಲಾಖೆ ಕಾರ್ಯ ಪಾಲಕ ಅಭಿಯಂತರರಾದ ಮಂಜುನಾಥ್ , ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪ್ರಕಾಶ್ ,ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಹಾಲಿಂಗಯ್ಯ ಹಾಗೂ ಎನ್ ಎಚ್‍ಐ ಹಾಗೂ ಎನ್ ಎಚ್ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here