ವಿವಿಧ ರಾಜಕೀಯ ಪಕ್ಷದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಸಭೆ:ಕೋವಿಡ್ ಕಾರಣ ಮನೆ-ಮನೆ ಭೇಟಿಗೆ ಐದು ಜನರಿಗೆ ಮಾತ್ರ ಅವಕಾಶ. ವಿ.ವಿ.ಜ್ಯೋತ್ಸ್ನಾ

0
127

ಕಲಬುರಗಿ.ಆ.25-ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯು ಇದೇ ಸೆಪ್ಟೆಂಬರ್ 3 ರಂದು ನಡೆಯಲಿದ್ದು, ಕೋವಿಡ್ ಕಾರಣ ಮನೆ-ಮನೆ ಭೇಟಿಯ ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿ ಸೇರಿದಂತೆ 5 ಜನ ಮಾತ್ರ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಹೇಳಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಚುನಾವಣಾ ಆಯೋಗದಿಂದ ಬಂದಿರುವ ಮಾರ್ಗಸೂಚಿಗಳನ್ನು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಿಬೇಕು. ಕೋವಿಡ್ ಕಾರಣ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅಭ್ಯರ್ಥಿಗಳು ಪ್ರಚಾರದ ಸಂದರ್ಭದಲ್ಲಿ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡುವುದರೊಂದಿಗೆ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಗುಂಪು ಕಟ್ಟಿಕೊಂಡು ಪ್ರಚಾರಕ್ಕೆ ಅವಕಾಶವಿರುವುದಿಲ್ಲ. ಆಟೋದಲ್ಲಿ ಮೈಕ್ ಮೂಲಕ ಪ್ರಚಾರಕ್ಕೂ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಮತದಾನ ದಿನದಂದು ಎಲ್ಲಾ ರಾಜಕೀಯ ಪಕ್ಷಗಳು ಕೋವಿಡ್-19 ನಿಯಮಗಳು ಮತ್ತು ಚುನಾವಣಾ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಗೊಂಡು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಳೆದ ಸೋಮವಾರ (ಆ.23) ಕೊನೆಯ ದಿನವಾಗಿತ್ತು. ನಗರದ 55 ವಾರ್ಡ್‍ಗಳಲ್ಲಿ ಒಟ್ಟು 360 ನಾಮಪತ್ರಗಳ ಸಲ್ಲಿಕೆಯಾಗಿವೆ. ಮಂಗಳವಾರ ನಡೆದ ನಾಮಪತ್ರಗಳ ಪರಿಶೀಲನೆ ಸಂದರ್ಭದಲ್ಲಿ 19 ನಾಮಪತ್ರಗಳು ತಿರಸ್ಕøತವಾಗಿವೆ. ಉಮೇದುವಾರಿಕೆ ಹಿಂಪಡೆಯಲು ಗುರುವಾರ ಆ.26 ಕೊನೆಯ ದಿನವಾಗಿದೆ ಎಂದರು.

ವಿದ್ಯುನ್ಮಾನ ಮತಯಂತ್ರಗಳನ್ನು ರ್ಯಾಂಡಮೈಜೇಷನ್ ಮಾಡಿದ ನಂತರ ಬೇರೆ ಬೇರೆ ವಾರ್ಡ್‍ಗಳಿಗೆ ಹಂಚಿಕೆ ಮಾಡಲಾಗುತ್ತದೆ. ಇನ್ನೂ ರಾಜಕೀಯ ಪಕ್ಷಗಳು ಪೆÇೀಲಿಂಗ್ ಏಜೆಂಟ್ ಹಾಗೂ ಕೌಂಟಿಂಗ್ ಏಜೆಂಟರ ಪಟ್ಟಿಯನ್ನು ಶೀಘ್ರವೇ ಸಲ್ಲಿಸಲು ಪಕ್ಷದ ಮುಖಂಡರಿಗೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದರು.
ಸಭೆಯಲ್ಲಿ ಕಲಬುರಗಿ ನಗರ ಪೆÇಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀμï ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಸಹಾಯಕ ಆಯುಕ್ತೆ ಮೋನಾ ರೂಟ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಚುನಾವಣಾಧಿಕಾರಿಗಳೊಂದಿಗೆ ಸಭೆ: ರಾಜಕೀಯ ನಾಯಕರ ಸಭೆಯ ಬಳಿಕ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಜೊತೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ, ಈಗಾಗಲೇ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿರುವ ಕಾರಣ ಮುಂದಿನ ಒಂದು ವಾರಗಳ ಕಾಲ ತಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಹೆಚ್ಚಿರಲಿದೆ. ಚುನಾವಣಾ ಮಾರ್ಗಸೂಚಿಯಂತೆ ತುಂಬಾ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ನಗರದ ನೂತನ ವಿದ್ಯಾಲಯದಲ್ಲಿ ಸ್ಟ್ರಾಂಗ್ ರೂಮ್ ಸ್ಥಾಪಿಸಲಾಗಿದೆ. ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಪಿಆರ್‍ಒ ಹಾಗೂ ಚುನಾವಣಾ ಏಜೆಂಟರು ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಜನರಿಗೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯವರೆಗೆ ಎರಡು ಹಂತವಾಗಿ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಕುರಿತು ತರಬೇತಿ ಕಾರ್ಯ ಗುರುವಾರದಿಂದ ನೀಡಲಾಗುತ್ತದೆ ಎಂದು ವಿ.ವಿ.ಜ್ಯೋತ್ಸ್ನಾ ತಿಳಿಸಿದರು.

ಪಾಲಿಕೆಯ ಒಟ್ಟು 55 ವಾರ್ಡ್‍ಗಳಲ್ಲಿ 471 ಮುಖ್ಯ ಮತಗಟ್ಟೆ ಮತ್ತು 62 ಆಕ್ಸಲರಿ ಮತಗಟ್ಟೆ ಸೇರಿದಂತೆ 533 ಮತಗಟ್ಟೆಯಲ್ಲಿನ ಎಲ್ಲಾ ಮತದಾರರ ಪಟ್ಟಿಯನ್ನು ಗುರುವಾರದೊಳಗಾಗಿ ಚುನಾವಣಾಧಿಕಾರಿಗಳಿಗೆ ನೀಡಲಾಗುವುದು. ಇದಲ್ಲದೇ, ಸೇವಾ ನಿರತ ಮತದಾರರಿಗೆ ಅಂಚೆ ಮತಗಳ ಚಲಾವಣೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಮತದಾನ ದಿನದಂದು ಯಾವುದೇ ಗೊಂದಲಕ್ಕೆ ಅಸ್ಪದ ನೀಡಬಾರದು ಮತ್ತು ಮರು ಮತದಾನವಾಗದಂತೆ ಚುನಾವಣಾಧಿಕಾರಿಗಳು ಹೆಚ್ಚು ಗಮನಹರಿಸಬೇಕು ಎಂದು ಡಿ.ಸಿ. ಅವರು ಸಲಹೆ ನೀಡಿದರು.

ಇದೇ ವೇಳೆ ನಗರ ಪೆÇಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರು ಮಾತನಾಡಿ, ಚುನಾವಣೆ ದಿನದಂದು ಯಾವುದೇ ವಾರ್ಡ್‍ನಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಪಡಿಸಿದಲ್ಲಿ ಮತ್ತು ಶಾಂತಿ ಸುವ್ಯಸ್ಥೆಗೆ ಧಕ್ಕೆಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ತಪ್ಪಿಸಲು ಸಶಸ್ತ್ರಪಡೆ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ಇರಲಿದ್ದಾರೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here