ಕೋವಿಡ್ ವಿರುದ್ದದ ಹೋರಾಟದಲ್ಲಿ ಭಾಗಿಯಾಗೋಣ; ಕೋವಿಡ್ ವಿರುದ್ದ ಜಯ ಸಾಧಿಸೋಣ: ಡಾ. ಹೆಚ್. ಎಲ್. ಜನಾರ್ಧನ್

0
118

ಬಳ್ಳಾರಿ,ಸೆ.04 : ಸಾರ್ವಜನಿಕರು ತಪ್ಪದೆ ಎರಡು ಡೋಸ್ ಲಸಿಕೆ ಪಡೆದು ಮುಂಬರುವ ಸಂಭಾವ್ಯ ಕೋವಿಡ್ ಅಲೆಯಲ್ಲಿ ಆಗಬಹುದಾದ ತೊಂದರೆಗಳಿಂದ ರಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ಎಲ್ಲರೂ ಸೇರಿ ಕೋವಿಡ್ ವಿರುದ್ದದ ಹೋರಾಟದಲ್ಲಿ ಭಾಗಿಯಾಗೋಣ ಕೋವಿಡ್ ವಿರುದ್ದ ಜಯ ಸಾಧಿಸೋಣ ಎಂದು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಸಹಯೋಗದೊಂದಿಗೆ ನಿರಂತರ ಲಸಿಕಾ ಕಾರ್ಯ ನಿಮಿತ್ತ ನಗರದ ಪ್ರಮುಖ ವೃತ್ತ, ಮಾರುಕಟ್ಟೆ, ಜನನಿಬೀಡ ಪ್ರದೇಶಗಳಲ್ಲಿ ಕೋವಿಡ್ ಲಸಿಕೆ ಸಂಚಾರಿ ತಂಡಗಳು ಕಾರ್ಯನಿರ್ವಹಿಸುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಉಪಸ್ಥಿತರಿದ್ದ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.
ಈಗಾಗಲೇ ಜಿಲ್ಲೆಯಾದ್ಯಂತ ಎಲ್ಲಾ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಗ್ರಾಮ ಮಟ್ಟದಲ್ಲಿ ಮತ್ತು ನಗರಗಳ ಆಯ್ದ ಸ್ಥಳಗಳಲ್ಲಿ ಗರ್ಭಿಣಿ-ಬಾಣಂತಿಯರಿಗೂ ಸೇರಿದಂತೆ 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರೂ ಸಹ ತಪ್ಪದೆ ಲಸಿಕೆ ಪಡೆಯಿರಿ ಎಂದರು.
ಕೋವಿಡ್ ನಿಯಂತ್ರಣಕ್ಕಾಗಿ ಸದಾ ಮಾಸ್ಕ್ ಧರಿಸುವುದು, ವ್ಯಕ್ತಿಗತ 06 ಅಡಿಗಳ ಸಾಮಾಜಿಕ ಅಂತರ ಕಾಪಾಡುವುದು. ಕೈಗಳನ್ನು ಸಾಬೂನು ಮತ್ತು ನೀರಿನಿಂದ ಅಥವಾ ಸ್ಯಾನಿಟೈಸರ್‍ನಿಂದ ಸ್ವಚ್ಚಗೊಳಿಸುವುದರ ಜೊತೆಗೆ ಲಕ್ಷಣಗಳು ಕಂಡು ಬಂದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್, ನಗರ ಆರೋಗ್ಯ ಅಭಿಯಾನ ವ್ಯವಸ್ಥಾಪಕ ಸುರೇಶ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಮಹಾನಗರ ಪಾಲಿಕೆಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here