ಬಾಲಮಂದಿರದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಎಸ್.ಅಶ್ವತಿ

0
99

ಮಂಡ್ಯ.ಸೆ 08 :- ಜಿಲ್ಲೆಯ ಬಾಲಮಂದಿರಗಳಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ನಗರದ ವಿಶೇಶ್ವರಯ್ಯ ನಗರ ಬಾಲಕಿಯರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ,
ಬಾಲಮಂದಿರದಲ್ಲಿ ಮಕ್ಕಳಿಗೆ ಮೂಲಸೌಕರ್ಯಗಳು, ಸಾಂತ್ವನ, ಪುನಶ್ಚೇತನದ ಮೂಲಕ ಮಕ್ಕಳನ್ನು ಸಂರಕ್ಷಿಸಿ ಎಂದು ಹೇಳಿದರು.

ಬಾಲಮಂದಿರದಲ್ಲಿನ ಸಮಸ್ಯೆಗಳು ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನೂತನ ಬಾಲಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು.

ನಂತರ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಲ್ಲಿನ ಪಾರಂಪರಿಕ ಹಾಗೂ ಪ್ರವಾಸಿತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋವಿಡ್ 2 ಅಲೆಯ ನಂತರ ಶ್ರೀರಂಗಪಟ್ಟಣದಲ್ಲಿ ಪುನರ್ ಆರಂಭಗೊಂಡ 6 ರಿಂದ 8 ನೇ ತರಗತಿ ಶಾಲೆಗಳಿಗೆ ಭೇಟಿ ನೀಡಿ ಮೂಲಸೌಕರ್ಯ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು, ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ , ಸ್ಯಾನಿಟೈಸರ್ ಬಳಕೆ ಬಗ್ಗೆ ಅರಿವು ಮೂಡಿಸಿದರು.

ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಲಸಿಕಾಕರಣ ಕೇಂದ್ರಕ್ಕೆ ಭೇಟಿ ನೀಡಿ, ಲಸಿಕಾಕರಣದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

ಈ‌ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಬಾಲಮಂದಿರದ ಅಧಿಕಾರಿಗಳು, ಹಾಗೂ ಶಾಲಾ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here