ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ರಾಷ್ಟ್ರ ಧ್ವಜಾರೋಹಣ, ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ಸರಳವಾಗಿ ಆಚರಣೆ :ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ

0
79

ಕಲಬುರಗಿ.ಸೆ.13:-ಸಾಂಕ್ರಾಮಿಕ ರೋಗ ಕೋವಿಡ್ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 17ರಂದು “ಕಲ್ಯಾಣ ಕರ್ನಾಟಕ ಉತ್ಸವ”ವನ್ನು ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 17ರಂದು ಬೆಳಿಗ್ಗೆ 8.30 ನಗರದ ಸರ್ದಾರ್ ವಲ್ಲಭ್ ಭಾಯ್ ಪುತ್ಥಳಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದಾರೆ. ನಂತರ ಬೆಳಿಗ್ಗೆ 9 ಗಂಟೆಗೆ ನಗರದ ಡಿ.ಎ.ಆರ್. ಪೆÇಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಧ್ವಜಾರೋಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುವಂತೆ ಅವರು ನಿರ್ದೇಶನ ನೀಡಿದರಲ್ಲದೆ, ನಗರದ ಪೆÇಲೀಸ್ ಪರೇಡ್ ಮೈದಾನ ಮತ್ತು ಸರ್ದಾರ್ ವಲ್ಲಭ್ ಭಾಯ್ ವೃತ್ತದಲ್ಲಿ ಸ್ವಚ್ಛತೆ, ಶಾಮಿಯಾನ ಹಾಗೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಕೋವಿಡ್-19 ಕಾರಣದಿಂದಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನಡೆಯಬೇಕಿದ್ದ ಪಥಸಂಚಲವನ್ನು ರದ್ದುಪಡಿಸಲಾಗಿದ್ದು, ಜೊತೆಗೆ ಅಂದು ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳಿರುವುದಿಲ್ಲ್ಲ ಎಂದ ಅವರು, ಅಂದು ಹೈದರಾಬಾದ್-ಕರ್ನಾಟಕ ವಿಮೋಚನಾದ ಹಿರಿಯ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ಸಂಘ ಸಂಸ್ಥೆಗಳು, ಅರೆ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 7.30ರೊಳಗಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಶಿμÁ್ಟಚಾರ ಪಾಲಿಸಬೇಕು. ಅಲ್ಲದೇ, ಕಾರ್ಯಕ್ರಮ ನಡೆಯುವ ಸ್ಥಳಗಳ ಸುತ್ತಮುತ್ತ ಹೆಚ್ಚು ಜನ ಗುಂಪುಗೂಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಸಮಾರಂಭ ನಡೆಯುವ ಡಿಎಆರ್ ಮೈದಾನವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವುದರ ಜೊತೆಗೆ, ಅಲ್ಲಿ ಅಗತ್ಯ ಆಸನಗಳ ವ್ಯವಸ್ಥೆ, ಜಲನಿರೋಧಕ (ವಾಟರ್ ಪ್ರೂಫ್) ಶಾಮಿಯಾನÀ, ಸುಸಜ್ಜಿತ ಮೈಕ್, ದೀಪಾಲಂಕಾರ, ಜನರೇಟರ್, ಅಗ್ನಿ ಶಾಮಕ ದಳ ವಾಹನ ಮುಂತಾದವುಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮ ನಡೆಯುವ ಸ್ಥಳಗÀಳಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲನೆಯಾಗುವಂತೆ ಅಧಿಕಾರಿಗಳು ಗಮನಹರಿಸಬೇಕು. ಆರೋಗ್ಯ ಇಲಾಖೆಯವರು ಮಾಸ್ಕ್ ಇಲ್ಲದವರಿಗೆ ಮಾಸ್ಕ್ ವಿತರಿಸುವುದು, ಥರ್ಮಲ್ ಸ್ಕ್ಯಾನಿಂಗ್ ಮಾಡುವುದರ ಜೊತೆಗೆ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಒದಗಿಸಬೇಕು ಎಂದರು.

ಪ್ಲಾಸ್ಟಿಕ್ ಧ್ವಜ ನಿಬರ್ಂಧ: ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಪ್ಲಾಸ್ಟಿಕ್ ನಿಂದ ತಯಾರಾದ ರಾಷ್ಟ್ರ ಧ್ವಜಗಳು ಮಾರಾಟವಾಗುವ ಸಾಧ್ಯತೆಯಿದ್ದು, ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಅಂತಹ ಪ್ಲಾಸ್ಟಿಕ್ ಧ್ವಜ ತಯಾರಿಕೆ ಹಾಗೂ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ನಿರ್ದೇಶಿಸಿದರು.

ಈ ಸಭೆಯಲ್ಲಿ ಸಹಾಯಕ ಆಯುಕ್ತೆ ಮೋನಾ ರೂಟ್, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಕÀಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here