ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಕಾಮಗಾರಿ ಚುರುಕಿಗೆ ಸೂಚನೆ

0
111

ಹಾಸನ ಸೆ.13 :- ಲೋಕಸಭಾ ಸದಸ್ಯರು ಹಾಗೂ ವಿಧಾನಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗಳ ಪಟ್ಟಿ ಪಡೆದು ತ್ವರಿತವಾಗಿ ಅನುದಾನ ಬಳಸಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಶಾಸಕರ ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ನಿರ್ವಹಣೆಯ ಕುರಿತು ಸಭೆ ನಡೆಸಿ ಮಾತನಾಡಿದ ಅವರು 2021-22 ನೇ ಸಾಲಿನ ಅನುದಾನಕ್ಕೆ ಕಾಮಗಾರಿಗಳ ಕ್ರಿಯಾ ಯೋಜನೆ ಪಟ್ಟಿ ಪಡೆದು ಗುಣಮಟ್ಟ ಕಾಯ್ದುಕೊಂಡು ವೇಗವಾಗಿ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

2018-19 ನೇ ಸಾಲಿನ ಬಾಕಿ ಇರುವ ಕಾಮಗಾರಿಗಳನ್ನು ಸಹ ಗುಣಮಟ್ಟ ಕಾಯ್ದುಕೊಂಡು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಯೋಜನೆಗಳ ವಿವರಗಳನ್ನು 10 ದಿನಗಳಲ್ಲಿ ಸಲ್ಲಿಸಬೇಕು ಅದಕ್ಕೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here