ರಾವಿಹಾಳದಲ್ಲಿ ಶೌಚಾಲಯ ಬಳಕೆ ಅಭಿಯಾನ ಕಾರ್ಯಕ್ರಮ

0
67

ಬಳ್ಳಾರಿ ಸೆ.15 : ಸಿರುಗುಪ್ಪ ತಾಲೂಕು ರಾವಿಹಾಳ ಗ್ರಾಮದಲ್ಲಿ ಶೌಚಾಲಯ ಬಳಕೆ ಅಭಿಯಾನ ಕಾರ್ಯಕ್ರಮಕ್ಕೆ ರಾವಿಹಾಳ ಗ್ರಾಪಂ ಸದಸ್ಯರಾದ ಆರ್.ಟಿ. ಮಾದಣ್ಣ ಅವರು ಮಂಗಳವಾರ ಚಾಲನೆ ನೀಡಿದರು.
ಚಾಲನೆ ನೀಡಿದ ನಂತರ ಮಾತನಾಡಿದ ಅವರು ಗ್ರಾಮದ ಜನರು ಕಡ್ಡಾಯವಾಗಿ ಶೌಚಾಲಯ ಬಳಸಬೇಕು. ಶೌಚಾಲಯ ಬಳಸುವುದರಿಂದ ಗ್ರಾಮವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬಹುದು. ಗ್ರಾಮ ಪಂಚಾಯತಿ ವತಿಯಿಂದ ಉಚಿತವಾಗಿ ಶೌಚಾಲಯ ನಿರ್ಮಿಸಿಕೊಡಲಾಗುತ್ತಿದ್ದು, ಪ್ರತಿಯೊಬ್ಬರು ಶೌಚಾಲಯ ನಿರ್ಮಿಸಿಕೊಳ್ಳಿ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಪಂಚಾಯತಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಮತ್ತು ಊರಿನ ಮುಖಂಡರು ಇದ್ದರು.

LEAVE A REPLY

Please enter your comment!
Please enter your name here