ಅಮೃತ ಗ್ರಾಮ ಪಂಚಾಯತ್‍ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ 27 ಗ್ರಾಮ ಪಂಚಾಯತ್‍ಗಳ ಆಯ್ಕೆ- ಸಚಿವ ಡಾ.ನಾರಾಯಣಗೌಡ

0
87

ಮಂಡ್ಯ, ಸೆ.17;- 75ನೇ ಸ್ವಾತಂತ್ರ್ಯೋತ್ಸವದ ನೆನಪಿಗಾಗಿ ಅಮೃತ ಗಾಮ ಪಂಚಾಯಿತಿ ಯೋಜನೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಘೋಷಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲು ರೇಷ್ಮೆ, ಯುವ ಬಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮ ಪಂಚಾಯತ್‍ ಆಯ್ಕೆ ಸಮಿತಿಯ ಸಭೆ ನಡೆಸಲಾಯಿತು.

ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಒಟ್ಟೂ 27 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವ ಸಂಬಂಧ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಶೀಘ್ರವೇ ಯೋಜನೆಯನ್ನು ಅನುಷ್ಠಾನಗೊಳಿಸಿ, ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಮಂಡ್ಯ ಶಾಸಕರಾದ ಎಂ. ಶ್ರೀನಿವಾಸ್, ಮದ್ದೂರು ಶಾಸಕ ಡಿ.ಸಿ. ತಮ್ಮಣ್ಣ, ಪಾಂಡವಪುರ ಶಾಸಕ ಸಿ.ಎಸ್. ಪುಟ್ಟರಾಜು, ಮಳವಳ್ಳಿ ಶಾಸಕ ಡಾ. ಕೆ. ಅನ್ನದಾನಿ, ನಾಗಮಂಗಲ ಶಾಸಕ ಸುರೇಶ್ ಗೌಡ, ವಿಧಾನ ಪರಿಷತ್‍ ಸದಸ್ಯರಾದ ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಮಂಡ್ಯ ಜಿಲ್ಲಾ ಅಪರ ಜಿಲ್ಲಾಧಿಕಾರಿ ಶೈಲಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವ್ಯ ಪ್ರಭು, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here