ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಅಗತ್ಯ ಜಿಲ್ಲಾಧಿಕಾರಿ ಆರ್.ಗಿರೀಶ್

0
105

ಹಾಸನ ಸೆ.18 :- ದೇಶ ಸ್ವಾತಂತ್ರ್ಯೋತ್ಸವಕ್ಕೆ ಬಂದು 75 ವರ್ಷಗಳು ಪೂರೈಸಿದ್ದು, ಇದರ ಹಿಂದೆ ಸಾವಿರಾರು ಮಹನೀಯರ ತ್ಯಾಗ, ಬಲಿದಾನಗಳಿವೆ. ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಸ್ಮರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಿರಂತರ ಸಾಂಸ್ಕೃತಿಕ ಮತ್ತು ಕ್ರೀಡಾ ಯುವಕ ಸಂಘ(ರಿ), ವಾಲ್ಮೀಕಿ ಮಹಿಳಾ ಸಾಂಸ್ಕೃತಿಕ ಸಂಸ್ಥೆ(ರಿ), ಜಿಲ್ಲೆಯ ವಿವಿಧ ಯುವಕ, ಯುವತಿ ಮಹಿಳಾ ಮಂಡಳಿಗಳು, ಎನ್.ಎಸ್.ಎಸ್ ಘಟಕಗಳು. ಎನ್.ಸಿ.ಸಿ ಘಟಕಗಳು ಶಾಲಾ ಕಾಲೇಜುಗಳು ಹಾಗೂ ಸಂಘ ಸಂಸ್ಥೆಗಳು, ಭಾರತ ಸೇವಾದಳ, ಯುವ ಸ್ಪಂದನ ಕೇಂದ್ರ ಹಾಸನ ಇವರ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ ಫಿಟ್ ಇಂಡಿಯಾ ಓಟ 0.2 ಚಾಲನೆ ನೀಡಿ ಅವರು ಮಾತನಾಡಿದರು.

ಯಾವುದೇ ದೇಶ ಆರೋಗ್ಯಕರವಾಗಿರಬೇಕಾದರೇ ಜನರು ಸದೃಢವಾಗಿರಬೇಕು ಆಗ ಮಾತ್ರ ದೇಶದ ಸುಬಧ್ರ ರಾಷ್ಟ್ರ ನಿರ್ಮಾಣ ಸಾಧ್ಯ ಈ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕಳೆದ ವರ್ಷದಿಂದ ಫಿಟ್ ಇಂಡಿಯಾ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಹೆಚ್ಚು ಆರೋಗ್ಯದ ಸಮಸ್ಯೆಗಳು ಕಂಡು ಬರುತ್ತಿರುವುದರಿಂದ ದುಡಿಯುವ ಸಾಮಥ್ರ್ಯ ಕಡಿಮೆಯಾಗುತ್ತಿದೆ. ಹಾಗಾಗಿ ಆರೋಗ್ಯವಂತ ದೇಶ ನಿರ್ಮಾಣ ಮಾಡಬೇಕಾದರೆ ನಮ್ಮ ಜೀವನದಲ್ಲಿ ವ್ಯಾಯಮ, ಯೋಗ, ಓಟ ಮತ್ತಿತರ ಭೌತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರೆ ದೇಹ ಸದೃಢರಾಗಿರಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿದ್ದು, ಆಗಸ್ಟ್ 15 ರಿಂದ ಅಕ್ಟೋಬರ್ 2 ರ ವರೆಗೆ ದೇಶದ ವಿವಿಧ ಜಿಲ್ಲೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಯುವಕರು ಮುಖ್ಯವಾಗಿ ದೈಹಿಕ ಸಾಮಥ್ರ್ಯ ಕಾಪಾಡಿಕೊಳ್ಳುವುದರ ಜೊತೆಗೆ ಕನಿಷ್ಠ 30 ನಿಮಿಷ ವ್ಯಾಯಾಮಕ್ಕಾಗಿ ಮೀಸಲಿಟ್ಟು, ಅದನ್ನು ಜೀವನ ಶೈಲಿಯಲ್ಲಿ ರೂಢಿಸಿಕೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಅವರು ಹೇಳಿದರು.

ಯುವಕರು ನಮ್ಮ ದೇಶದ ಆಸ್ತಿ ವಿವಿಧ ಕಾರ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವುದರಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರಲ್ಲದೆ ಫಿಟ್ ಇಂಡಿಯ ಓಟ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆಜಾದಿ ಕಾ ಅಮೃತ್ ಮಹೋತ್ಸವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಪ್ರಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಡಿ.ವೈ.ಎಸ್ಪಿ ಪುಟ್ಟ ಸ್ವಾಮಿ, ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ಅಭಿಷೇಕ್ ಚವರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಹರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ಸುದರ್ಶನ್, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಮಹಾಂತಪ್ಪ, ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಬಿ.ಟಿ ಮಾನವ, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು. ವಿದ್ವನ್ ಮುರುಳಿ, ಭನುಮೋಶ್ರೀ, ಪ್ರಸಾದ್, ನಾಗಶ್ರೀ ಮತ್ತು ತಂಡದಿಂದ ಪ್ರಾರ್ಥನೆ ಗ್ಯಾರೆಂಟಿ ರಾವiಣ್ಣ ತಂಡದಿಂದ ಜಾಗೃತಿ ಗೀತೆಗಳ ಗಾಯನ ನಡೆಯಿತು. ಇದೇ ವೇಳೆ ನಗರದ ಪ್ರಮುಖ ರಸ್ತೆಗಳಲ್ಲಿ ಫಿಟ್ ಇಂಡಿಯಾ 0.2 ಓಟ ಗಮನಸೆಳೆಯಿತು.

LEAVE A REPLY

Please enter your comment!
Please enter your name here