ಯಶವಂತನಗರದಲ್ಲಿ ಕಲ್ಯಾಣ ಕರ್ನಾಟಕ ಧ್ವಜಾರೋಹಣ-ವಿಶ್ವಕರ್ಮ ಜಯಂತಿ ಹಾಗೂ ಕೋವಿಡ್ ಲಸಿಕೆ ಮೇಳ ಕಾರ್ಯಕ್ರಮ

0
271

ಸಂಡೂರು:ಸೆ:18:-ಸಂಡೂರು ತಾಲೂಕು ಯಶವಂತನಗರ ಗ್ರಾಮ ಪಂಚಾಯಿತಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಧ್ವಜಾರೋಹಣವನ್ನು ನೆರವೇರಿಸಿ ಮತ್ತು ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು

ನಂತರ ಕೋವಿಡ್ ಲಸಿಕ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಂಜನಪ್ಪ ಅವರು ಮಾತನಾಡಿ ಮಾಸ್ಕ್ ಸ್ಯಾನಿಟೈಸರ್ ಮತ್ತು ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು ಪಿಡಿಒ ರೇವನಸಿದ್ದಪ್ಪ ಸಹ ಊರಿನ ಪ್ರತಿಯೊಬ್ಬರೂ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿದರು ನಂತರ ಅಂಗನವಾಡಿ ಕಾರ್ಯಕರ್ತೆ ಕವಿತಾ ಮಾತನಾಡಿ ಊರಿನಲ್ಲಿ ಎಲ್ಲ ಗರ್ಭಿಣಿ-ಬಾಣಂತಿ, ಅಂಗವಿಕಲರು ತಪ್ಪದೇ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಲ್ಲರೂ ಧೈರ್ಯವಾಗಿ ಲಸಿಕೆಯನ್ನು ಪಡೆದುಕೊಳ್ಳಿ ಎಂದು ಹೇಳಿದರು

ಆರೋಗ್ಯ ನಿರೀಕ್ಷಕ ಅಧಿಕಾರಿ ಅಮ್ಜದ್ ಅಲಿ ಮಾತನಾಡಿ ಗ್ರಾಮದಲ್ಲಿ ಬರುವ ಹದಿನೆಂಟು ಮತ್ತು 60 ವರ್ಷ ಮೇಲ್ಪಟ್ಟವರು ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಹೇಳಿದರು

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಂಜಿನಪ್ಪ, ಪಿಡಿಒ ರೇವಣಸಿದ್ದಪ್ಪ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹನುಮಂತಪ್ಪ, ಫಾರ್ಮಸ್ ಅಧಿಕಾರಿ ಪರಶುರಾಮ್, ಆರೋಗ್ಯ ನಿರೀಕ್ಷಣಾ ಅಧಿಕಾರಿ ಅಮ್ಜದ್ ಅಲಿ, ಸಮುದಾಯ ಆರೋಗ್ಯ ಅಧಿಕಾರಿ ಅಶೋಕ್ ಅಂಗನವಾಡಿ ಕಾರ್ಯಕರ್ತೆಯರ ಟಿ ಕವಿತಾ ಗ್ರಾಮದ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತೆಯರಾದ ಸುನಂದಾ, ನಿರ್ಮಲಾ, ಇನ್ನುಳಿದ ಗ್ರಾಮದ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಊರಿನ ಗ್ರಾಮಸ್ಥರು ಭಾಗವಹಿಸಿದ್ದರು
ಒಟ್ಟು 381 ಫಲಾನುಭವಿಗಳು ಲಸಿಕೆ ಹಾಕಿಸಿಕೊಂಡರು.

LEAVE A REPLY

Please enter your comment!
Please enter your name here