ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

0
125

ಹಾಸನ ಸೆ.20 :- ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಉ+1 ಆಧಾರದ ಮೇಲೆ ವಸತಿ ಸಮುಚ್ಚಯ ನಿಲಯಗಳನ್ನು ಅರ್ಹರಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯ ಅನುಷ್ಟಾನ ಕುರಿತು ಸಭೆ ನಡೆಸಿ ಮಾತನಾಡಿದ ಅವರು ಅರಸೀಕೆರೆ ಮತ್ತು ಹೊಳೆನರಸೀಪುರ ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸುವವಂತೆ ಚರ್ಚಿಸಲಾಯಿತು.

ಹೊಳೆನರಸೀಪುರ ತಾಲ್ಲೂಕು 8 ವಸತಿ ಹಾಗೂ ಅರಸೀಕೆರೆ ತಾಲ್ಲೂಕಿನಲ್ಲಿ 2 ವಸತಿ ಸಮುಚ್ಚಯ ನಿಲಯಗಳನ್ನು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದಿಂದ 6 ಲಕ್ಷ ಹಾಗೂ ಕೇಂದ್ರದಿಂದ Pಒಂಙ ಯಿಂದ ಒಂದೂವರೆ ಲಕ್ಷ ಅನುದಾನ ನೀಡಲಾಗುವುದು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ್, ಕಾರ್ಯ ಪಾಲಕ ಎಂಜಿನಿಯರ್ ಮಂಜುನಾಥ್, ಅರಸೀಕೆರೆ ನಗರ ಸಭೆಯ ಅಧ್ಯಕ್ಷರಾದ ಗಿರೀಶ್ ಮತ್ತು ಪೌರಯುಕ್ತರಾದ ರಾಜಶೇಖರ್ ಹಾಗೂ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here