ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

0
95

ಮಡಿಕೇರಿ ಸೆ.22 :-ಲೋಕ ಶಿಕ್ಷಣ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲಾ ಸಾಕ್ಷರತಾ ಸಮಿತಿಯ ಕಾರ್ಯಕಾರಿ ಸಹಭಾಗಿತ್ವದಲ್ಲಿ ಜಿಲ್ಲೆಯನ್ನು ಸಾಕ್ಷರತಾ ಸಮೃದ್ದ ಸುಸ್ಥಿರ ಅಭಿವೃದ್ಧಿಯೊಂದಿಗೆ ಅನಕ್ಷರತೆಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ಸಪ್ತಾಹದೊಂದಿಗೆ ಸಾಕ್ಷರತಾ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.
ಜಿ.ಪಂ. ಉಪ ಕಾರ್ಯದರ್ಶಿ ಲಕ್ಷ್ಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾಕ್ಷರತೆಯೂ ಪ್ರತಿ ವ್ಯಕ್ತಿಯು ಸಮಾಜ ಮುಖಿಯಾಗಿ ಜೀವಿಸಲು ಅತ್ಯಗತ್ಯ ಎಂದರು.
ಲೋಕ ಶಿಕ್ಷಣ ಇಲಾಖೆಯು ಸಾಕ್ಷರತೆ ಹೆಚ್ಚಿಸುವಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಗತಿ ಸಾಧಿಸುವಂತಾಗಬೇಕು ಎಂದರು.
ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಜಿ.ಪಂ. ಮುಖ್ಯಯೋಜನಾಧಿಕಾರಿ ರಾಜು ಗೋಪಾಲ್, ಜಿಲ್ಲಾ ಶಿಕ್ಷಣಾಧಿಕಾರಿ ಶೀಧರ್ ಹಾಗೂ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮೈಸೂರು ಮರಿಮಲ್ಲಪ್ಪ ಕಾಲೇಜಿನ ಉಪನ್ಯಾಸಕರಾದ ವಿಜಯ ಸತ್ಯಸಾಯಿ ಇತರರು ಇದ್ದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮೋಹನ ಅವರು ಸ್ವಾಗತಿಸಿದರು. ಪೆರಾಜೆ ಶಿಕ್ಷಕರಾದ ರೇಖಾ ಅವರು ವಂದಿಸಿದರು.

LEAVE A REPLY

Please enter your comment!
Please enter your name here