ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಜಿಲ್ಲೆಯ ವಿವಿಧ ಶಾಲೆಗಳ ಭೇಟಿ

0
79

ಶಿವಮೊಗ್ಗ, ಸೆಪ್ಟಂಬರ್ 24 : ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇಲಾಖೆಯು ಚಿತ್ರದುರ್ಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ, ಶಿವಮೊಗ್ಗ ಲೋಕಾಯುಕ್ತದ ಪಿ.ಐ.ರವರುಗಳು ಹಾಗೂ ಸಿಬ್ಬಂದಿಗಳೊಂದಿಗೆ ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಶಾರದ ವಿಲಾಸ ಪ್ರಾಥಮಿಕ & ಪ್ರೌಡ ಶಾಲೆ ಮತ್ತು ಸೂಳೆಬೈಲಿನ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು, ವಿದ್ಯಾರ್ಥಿಗಳು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರೀಶೀಲಿಸಿ, ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ, ದೈಹಿಕ ಅಂತರ ಕಾಯ್ದುಕೊಳ್ಳುವಂತೆ, ಹ್ಯಾಂಡ್ ಸ್ಯಾನಿಟೈಸರ್ ಮಾಡುವಂತೆ, ಮನೆಯಿಂದಲೇ ಕುಡಿಯುವ ನೀರು, ಆಹಾರಗಳನ್ನು ತರುವಂತೆ ಮತ್ತು ತಮ್ಮ ಪಾಲಕರಿಂದ ಒಪ್ಪಿಗೆ ಪತ್ರ ಬರೆಸಿಕೊಂಡು ಶಾಲಾ ಮುಖ್ಯ ಶಿಕ್ಷಕರಿಗೆ ನೀಡುವಂತೆ ಸೂಚಿಸಿರುತ್ತಾರೆ.
ಪ್ರಾಂಶುಪಾಲರು/ಮುಖ್ಯಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳ ಆಗಮನ, ನಿರ್ಗಮನದಲ್ಲಿ ದಟ್ಟಣೆಯಾಗದಂತೆ, ಎಲ್ಲಾ ವಿದ್ಯಾರ್ಥಿಗಳ ದೇಹದ ಉಷ್ಣತೆಯನ್ನು ಪರೀಕ್ಷಿಸಿ, ಹ್ಯಾಂಡ್ ಸ್ಯಾನಿಟೈಜರ್ ನೀಡುವಂತೆ, ಪ್ರತೀ ಬೆಂಚುಗಳಿಗೆ 02 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸುವ ಹಾಗೂ ಪ್ರತಿ ಕೊಠಡಿಯಲ್ಲಿ ಕೇವಲ 20 ವಿದ್ಯಾರ್ಥಿಗಳಿಗೆ ಮಾತ್ರ ಕೂರುವ ವ್ಯವಸ್ಥೆ ಮಾಡುವಂತೆ, ಶೌಚಾಲಯದಲ್ಲಿ ನೀರು, ಸೋಪು, ಸ್ಯಾನಿಟೈಜರ್ ವ್ಯವಸ್ಥೆ ಮಾಡುವಂತೆ ಹಾಗೂ ಪ್ರತೀ ಶಾಲೆಯಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಿ ಕೋವಿಡ್-19ರ ಮಾರ್ಗಸೂಚಿಗಳು ಪಾಲನೆಯಾಗುತ್ತಿರುವ ಬಗ್ಗೆ ಪ್ರತಿ ದಿನ ಸಂಜೆ ವರದಿ ನೀಡುವಂತೆ ಸೂಚಿಸಿರುತ್ತಾರೆ.

LEAVE A REPLY

Please enter your comment!
Please enter your name here