ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಪವನಕುಮಾರ ಮಾಲಪಾಟಿ ಸೂಚನೆ ಕ್ಲೀನ್ ಇಂಡಿಯಾ ಕ್ಯಾಂಪೇನ್:11 ಟನ್ ಪ್ಲಾಸ್ಟಿಕ್ ಸಂಗ್ರಹಿಸಿ

0
82

ಬಳ್ಳಾರಿ,ಸೆ.27 : ಸ್ವಚ್ಛ ಭಾರತ ಆಂದೋಲನದ ಅಂಗವಾಗಿ ಅ.1ರಿಂದ 31ರವರೆಗೆ ಜಿಲ್ಲೆಯಾದ್ಯಂತ ಒಂದು ಬಾರಿ ಬಳಕೆ ಮಾಡಬಹುದಾದ 11 ಟನ್ ಪ್ಲಾಸ್ಟಿಕ್‍ಗಳನ್ನು ಸಂಗ್ರಹಿಸಬೇಕು.ಇದಕ್ಕೆ ಸಂಬಂಧಿಸಿದಂತೆ ಸಮಿತಿಯೊಂದನ್ನು ರಚಿಸಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಪವವಕುಮಾರ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ನೆಹರು ಯುವ ಕೇಂದ್ರದ ಯುವಕಾರ್ಯಕ್ರಮಗಳ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮತ್ತು ಜಿಪಂ ಅಧಿಕಾರಿಗಳು,ನೆಹರು ಯುವಕೇಂದ್ರದ ಅಧಿಕಾರಿಗಳು ಹಾಗೂ ಇನ್ನೀತರ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ 11 ಸಾವಿರ ಕೆ.ಜಿ ಒಂದು ಬಾರಿ ಬಳಕೆ ಮಾಡಬಹುದಾದ ಪ್ಲಾಸ್ಟಿಕ್ ಸಂಗ್ರಹಿಸಬೇಕು ಎಂದು ಅವರು ತಿಳಿಸಿದರು.
ಕ್ಯಾಚ್ ದೀ ರೇನ್ ಹಾಗೂ ಜಲಸಂರಕ್ಷಣೆಗೆ ಸಂಬಂಧಿಸಿದಂತೆ ಸುಧೀರ್ಘವಾಗಿ ಚರ್ಚಿಸಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಜಲಸಂರಕ್ಷಣೆ ಮತ್ತು ನೀರಿನ ಮಿತ ಬಳಕೆಗೆ ಸಂಬಂಧಿಸಿದಂತೆ ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಡಿಸಿ ಮಾಲಪಾಟಿ ಅವರು ನೆಹರು ಯುವ ಕೇಂದ್ರದ 2020-21ರ ಕ್ರಿಯಾಯೋಜನೆಗೆ ಅನುಮೋದನೆ ನೀಡಿದರು. ನೆಹರು ಯುವಕೇಂದ್ರದಿಂದ ನೀಡಲಾಗುವ ಬೆಸ್ಟ್ ಯುಥ್ ಕ್ಲಬ್ ಅವಾರ್ಡ್‍ಗೆ ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಅಧಿಕಾರಿ ಮಾಂಟು ಪಾತರ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ, ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಜಿ.ಡಿ.ಹಳ್ಳಿಕೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here