ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭ ಅ.2 ಮತ್ತು 3ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ನೂತನ ಜಿಲ್ಲೆ ಉದ್ಘಾಟನೆ

0
170

ವಿಜಯನಗರ(ಹೊಸಪೇಟೆ),ಸೆ:30:- ನೂತನ ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭವು ಅ.2ರಂದು ಸಂಜೆ 6ಕ್ಕೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದ ವಿದ್ಯಾರಣ್ಯ ವೇದಿಕೆಯಲ್ಲಿ ನಡೆಯಲಿದೆ ಎಂದು ವಿಜಯನಗರ/ಬಳ್ಳಾರಿಯ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ರಾಜ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯದ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘನ ಉಪಸ್ಥಿತಿವಹಿಸಲಿದ್ದು, ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‍ಸಿಂಗ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಉಜ್ಜಯಿನಿ ಪೀಠದ 1008 ಶ್ರೀಮದ್ ಉಜ್ಜಯಿನಿ ಅಭಿನವ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾ ಸ್ವಾಮಿಗಳು, ಹಂಪಿಯ ಶ್ರೀ ವಿರೂಪಾಕ್ಷೇಶ್ವರ ವಿದ್ಯಾರಣ್ಯ ಪೀಠದ ಶ್ರೀ ವಿದ್ಯಾರಣ್ಯ ಭಾರತಿ ಸ್ವಾಮೀಜಿಗಳು, ಹೊಸಪೇಟೆ, ಬಳ್ಳಾರಿ ಮತ್ತು ಹಾಲಕೆರೆಯ ಶ್ರೀ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದ ಡಾ.ಶ್ರೀ ಜಗದ್ಗುರು ಸಂಗನಬಸವ ಮಹಾಸ್ವಾಮಿಗಳು, ಹಂಪಿಯ ಗಾಯತ್ರಿ ಪೀಠದ ಶ್ರೀ ದಯಾನಂದ ಪುರಿ ಮಹಾಸ್ವಾಮಿಗಳು, ಮಾತಂಗ ಪರ್ವತದ ಮಾತಂಗ ಆಶ್ರಮದ ಶ್ರೀ ಪೂರ್ಣಾನಾಂದ ಭಾರತಿ ಸ್ವಾಮಿಗಳು, ಮರಿಯಮ್ಮನಹಳ್ಳಿಯ ಗುರುಪಾದ ದೇವರ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು, ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿ ಮಠದ ಸದ್ಗುರು ಅಭಿನವ ಹಾಲಸಿದ್ದ ಶಿವಯೋಗಿಗಳು, ನಂದಿಪುರದ ಶ್ರೀ ದೊಡ್ಡಬಸವೇಶ್ವರ ಮಠದ ಶ್ರೀ ಮಹೇಶ್ವರ ಸ್ವಾಮಿಗಳು, ಜೋಗದ ಕೊಳ್ಳದ ದಿಗಂಬರ ರಾಜಭಾರತಿ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಸಚಿವರಾದ ಗೋವಿಂದ ಎಂ.ಕಾರಜೋಳ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಸಿ.ಸಿ.ಪಾಟೀಲ್, ಡಾ.ಕೆ.ಸುಧಾಕರ್, ವಿ.ಸುನೀಲ್ ಕುಮಾರ್, ಹಾಲಪ್ಪ ಬಸಪ್ಪ ಆಚಾರ್, ಎನ್.ಮುನಿರತ್ನ ಅವರು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ದೇಶ್ವರ್, ಡಾ.ಸೈಯ್ಯದ್ ನಾಸಿರ್ ಹುಸೇನ್, ಕರಡಿ ಸಂಗಣ್ಣ, ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ, ಪಿ.ಟಿ.ಪರಮೇಶ್ವರ ನಾಯ್ಕ್, ಎನ್.ವೈ.ಗೋಪಾಲಕೃಷ್ಣ, ಎಲ್.ಬಿ.ಪಿ.ಭೀಮಾನಾಯ್ಕ್, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಸೋಮಶೇಖರ್ ರೆಡ್ಡಿ, ಜಿ.ಕರುಣಾಕರ ರೆಡ್ಡಿ, ಜೆ.ಎನ್.ಗಣೇಶ್, ಎಂ.ಎಸ್.ಸೋಮಲಿಂಗಪ್ಪ, ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರಪ್ಪ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಚ್.ಹನುಮಂತಪ್ಪ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಮಂಜಮ್ಮ ಜೋಗತಿ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ್ ಜೀರೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಂಸದರಾದ ನಳೀನ್ ಕುಮಾರ್ ಕಟೀಲ್, ಶಾಸಕರಾದ ನರಸಿಂಹ ನಾಯಕ (ರಾಜುಗೌಡ), ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರಾದ ಎಂ.ಅಪ್ಪಣ್ಣ, ಚಲನಚಿತ್ರ ನಟರಾದ ಶ್ರೀನಾಥ್, ಜೆಎಸ್‍ಡಬ್ಲ್ಯೂ ಸ್ಟೀಲ್ ಲಿಮಿಟೆಡ್‍ನ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ವಿನೋದ್ ನೋವೆಲ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ಸಂಜೆ 4ಕ್ಕೆ ವಡಕರಾಯನ ದೇವಸ್ಥಾನದಿಂದ ರಥಬೀದಿಯಲ್ಲಿ ವಿಜಯನಗರ ವೈಭವ ಮೆರವಣಿಗೆ ನಡೆಯಲಿದ್ದು, ವೇದಿಕೆ ಕಾರ್ಯಕ್ರಮದ ನಂತದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಸಮಾರೋಪ ಸಮಾರಂಭ ಅ.3ರಂದು: ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭದ ಸಮಾರೋಪ ಸಮಾರಂಭವು ಅ.3ರಂದು ಸಂಜೆ 6ಕ್ಕೆ ನಡೆಯಲಿದೆ.
ಕೊಪ್ಪಳ ಗವಿ ಮಠ ಸಂಸ್ಥಾನದ ಶ್ರೀಮನ್ ನಿರಂಜನ್ ಪ್ರಣವ ಸ್ವರೂಪಿ ಜಗದ್ಗುರು ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಗಳು, ಹಗರಿಬೊಮ್ಮನಹಳ್ಳಿಯ ಕೋಗಳಿ ತಾಂಡದ ಶಾಂತಿಧಾಮ ಬಂಜಾರ ಗುರುಪೀಠದ ಶ್ರೀ ಸರ್ದಾರ್ ಸೇವಲಾಲ್ ಮಹಾರಾಜ್ ಅವರು ದಿವ್ಯಸಾನಿಧ್ಯ ವಹಿಸಲಿದ್ದಾರೆ.
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಕೇಂದ್ರ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರದ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‍ಸಿಂಗ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಮಂತ್ರಾಲಯದ ಕೇಂದ್ರ ರಾಜ್ಯ ಸಚಿವರಾದ ಭಗವಂತ್ ಖೂಬಾ, ಸಚಿವರಾದ ಕೆ.ಎಸ್.ಈಶ್ವರಪ್ಪ, ಮುರುಗೇಶ್ ರುದ್ರಪ್ಪ ನಿರಾಣಿ, ಅರಬೈಲ್ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಬಿ.ಎ.ಬಸವರಾಜ್(ಬೈರತಿ), ಕೆ.ಗೋಪಾಲಯ್ಯ, ಡಾ.ಕೆ.ಸಿ.ನಾರಾಯಣ ಗೌಡ ಅವರು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಆಗಿಸಲಿದ್ದಾರೆ.
ಶಾಸಕರಾದ ಸಿ.ಟಿ.ರವಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಕಾ.ಪು.ಸಿದ್ದಲಿಂಗಸ್ವಾಮಿ, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ವಿಜಯನಗರ ಜಿಲ್ಲೆಯ ಮೇಲುಸ್ತುವಾರಿ ಅಧಿಕಾರಿಗಳಾದ ಡಾ.ರಜನೀಶ್ ಗೋಯಲ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಅಜಯ್ ನಾಗಭೂಷಣ್ ಎಂ.ಎನ್, ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಮನಿಷ್ ಖರ್ಬಿಕರ್, ವಿಜಯನಗರ ಜಿಲ್ಲಾ ಹೋರಾಟ ಸಮಿತಿಯ ಹಿರಿಯ ಮುಖಂಡರಾದ ಮಲ್ಲಾರಿ ದೀಕ್ಷಿತ್, ಜೆಎಸ್‍ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ವಿಜಯನಗರ ವಕ್ರ್ಸ್ ಅಧ್ಯಕ್ಷರಾದ ಮುರುಗನ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳಾದ ಪಂಕಜ್‍ಕುಮಾರ್ ಪಾಂಡೆ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಸಿಂಧು ಬಿ.ರೂಪೇಶ್, ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿ ಪಿ.ಅನಿರುದ್ಧ್ ಶ್ರವಣ್, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಸಮಾರೋಪ ಸಮಾರಂಭದ ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here