ಅಕ್ಟೋಬರ್ 20ರಂದು ವಾಲ್ಮೀಕಿ ಜಯಂತಿ ಆಚರಿಸಲು ಜಿಲ್ಲಾಡಳಿತ ನಿರ್ಧಾರ : ಡಿ.ಸಿ.

0
126

ಶಿವಮೊಗ್ಗ, ಅಕ್ಟೋಬರ್ 05: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಅಕ್ಟೋಬರ್ 20ರಂದು ಬೆಳಿಗ್ಗೆ 11.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಸರ್ಕಾರವು ಈಗಾಗಲೇ ಹೊರಡಿಸಿರುವ ಕೊರೋನ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ.
ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಂದು ಬೆಳಿಗ್ಗೆ 11.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದೇ ಸಂದರ್ಭದಲ್ಲಿ ತಜ್ಞ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ, ಮಹರ್ಷಿ ವಾಲ್ಮೀಕಿಯವರ ಜೀವನ ಸಂದೇಶಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದ ಅವರು ಕಾರ್ಯಕ್ರಮಕ್ಕೂ ಮುನ್ನ ವಾಲ್ಮೀಕಿಯವರ ಜೀವನ ಸಂದೇಶವನ್ನು ಸಾರುವ ಗೀತಗಾಯನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ನಿಯಮಾನುಸಾರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸಮುದಾಯದ ಮುಖಂಡರು, ಉಪನ್ಯಾಸಕರು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದ ಅವರು, ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು. ಅಂತೆಯೇ ಅಂತರ್ಜಾತಿ ಹಾಗೂ ಸರಳ ಸಾಮೂಹಿಕ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹಧನದ ಚೆಕ್ಕನ್ನು ವಿತರಿಸಲಾಗುವುದು ಎಂದರು.
ಈ ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಡಳಿತದ ವತಿಯಿಂದ ನೀಡಬಹುದಾದ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು. ಸಾರ್ವಜನಿಕರು, ವಿದ್ಯಾರ್ಥಿಗಳು, ಸಮುದಾಯದ ಮುಖಂಡರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಇ.ಅಜ್ಜಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್ ಕೆ., ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕ ನಾಗರಾಜ್, ವಾಲ್ಮೀಕಿ ಸಮುದಾಯದ ಮುಖಂಡರಾದ ಲಕ್ಷ್ಮಣಪ್ಪ, ಶಿವಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಘಟನೆಗಳ ಮುಖಂಡ

LEAVE A REPLY

Please enter your comment!
Please enter your name here