ಸ್ವ-ಉದ್ಯೋಗದಿಂದ ಸ್ವಾವಲಂಬಿ ಜೀವನ ಸಾಗಿಸಿ

0
106

ಬಳ್ಳಾರಿ,ಅ.05 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವಕಾಶ ಸಿಗುವುದು ತುಂಬಾ ವಿರಳ, ಸಿಕ್ಕ ಅವಕಾಶವನ್ನು ಆಸಕ್ತಿಯಿಂದ ಕಲಿತು, ಸ್ವ-ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕ ಸೋಮಶೇಖರ ಅವರು ಹೇಳಿದರು.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ 30 ದಿನಗಳ ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ಸರ್ವಿಸ್ ತರಬೇತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಪ್ರತಿಯೊಂದಕ್ಕೆ ಸ್ಪರ್ಧೆ ಏರ್ಪಟ್ಟಿದೆ, ತರಬೇತಿಯು ಕಲಿಯುವ ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಎಲ್ಲಾ ವಿಷಯಗಳ ಕುರಿತು ತಿಳಿದುಕೊಂಡು ನಿಮ್ಮದೇ ಆದ ಬದುಕು ಕಟ್ಟಿಕೊಳ್ಳಿ, ಈ ಅವಕಾಶವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ತಿಳಿಸಿದರು.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಡಿ.ಶರಣಬಸವ ರೆಡ್ಡಿ ಅವರು ಮಾತನಾಡಿ ನಮ್ಮ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯ ತರಬೇತಿಯ ಜೊತೆಗೆ ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ, ಸಂವಹನ ಕೌಶಲ್ಯಗಳನ್ನು ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯ ಉಪ ನಿರ್ದೇಶಕರಾದ ಸಿ.ಕೆ ನಾಗರಾಜ, ಸಂಪನ್ಮೂಲ ವ್ಯಕ್ತಿಗಳಾದ ನಾಗರಾಜ, ಜಡೇಪ್ಪ, ಉಪನ್ಯಾಸಕರಾದ ಮಹಮ್ಮದ ನಿಸಾರ್, ಸಿದ್ದಲಿಂಗಮ್ಮ, ಸಂತೋಷಕುಮಾರ, ಕಿರಣಕುಮಾರ ಮತ್ತು 28 ಜನ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here