ಕೇಂದ್ರ ಕಾರಾಗೃಹದಲ್ಲಿ ಅರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ

0
84

ಕಲಬುರಗಿ.ಅ.07.-ಕಲಬುರಗಿ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೇಂದ್ರ ಕಾರಾಗೃಹ ಹಾಗೂ ನವೋದಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಉಚಿತ ಅರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು.
ಸಕ್ಕರೆ ಕಾಯಿಲೆ ತಜ್ಞ ಡಾ.ಸಂತೋಷ್ ಎನ್. ಹಾರಕೂಡ ಅವರು ಸಸಿಗೆ ನೀರೇರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಜನರು ಹೆಚ್ಚಿನ ಒತ್ತಡದಿಂದ ಕೆಲಸ ಮಾಡುವುದೇ ಅರೋಗ್ಯ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗಿದೆ. ಆದರಿಂದ ಪ್ರತಿಯೊಬ್ಬರೂ ನಿಯಮಿತವಾಗಿ ಅರೋಗ್ಯ ತಪಾಸಣೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆಯಬೇಕು ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ವಾಸಕೋಶ ತಜ್ಞ ಡಾ.ಶ್ರೀಕಾಂತ ದುರ್ಗೆ ಹಾಗೂ ಹೃದಯ ತಜ್ಞ ಡಾ. ಶಂಕರ ಗೌಡ ಅವರು ಮಾತನಾಡಿ, ಶಿಬಿರದ ಲಾಭ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ್ ಅವರು ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಅರೋಗ್ಯ ತಪಾಸಣೆ ಮಾಡಿಸಿಕೊಂಡು ಒತ್ತಡ ರಹಿತ ಕರ್ತವ್ಯ ಹಾಗೂ ಉತ್ತಮ ಜೀವನ ನಡೆಸಬಹುದಾಗಿದೆ ಎಂದು ತಿಳಿಸಿದರು.
ಈ ಶಿಬಿರದಲ್ಲಿ 150 ಜನ ಕಾರಾಗೃಹದ ಸಿಬ್ಬಂದಿಗಳು ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹ ಪ್ರಭಾರಿ ಅಧೀಕ್ಷಕರಾದ ವಿ ಕೃಷ್ಣಮೂರ್ತಿ, ಜೈಲರ್‍ಗಳಾದ ಸುನಂದಾ, ಗೋಪಾಲಕೃಷ್ಣ ಕುಲಕರ್ಣಿ, ಸೈನಾಜ ಎಂ, ನಿಗೇವಾನ, ಸರೋಜಾ ಎಸ್ ಬಿ, ನವೋದಯ ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಈ ಸಂಸ್ಥೆಯ ಅಧಿಕಾರಿ/ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕ ನಾಗಾರಾಜ ಮುಲಗೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here