ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಚಾಲನೆ

0
116

ಮಡಿಕೇರಿ ಅ.07:-ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಗುರುವಾರ ಶ್ರದ್ಧಾಭಕ್ತಿಯಿಂದ ಚಾಲನೆ ದೊರೆಯಿತು.
ವಿಧಾನಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ, ದಸರಾ ಸಮಿತಿ ಕಾರ್ಯಧ್ಯಕ್ಷರಾದ ರಮೇಶ್, ಪೌರಾಯುಕ್ತರಾದ ರಾಮದಾಸ್, ನಗರಸಭಾ ಸದಸ್ಯರು, ನಗರ ದಸರಾ ಸಮಿತಿ ಸದಸ್ಯರು ಇತರರು ಇದ್ದರು.
ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ದಂಡಿನ ಮಾರಿಯಮ್ಮ ದೇವಾಲಯ, ಕೋಟೆ ಮಾರಿಯಮ್ಮ ದೇವಾಲಯ ಮತ್ತು ಕಂಚಿ ಕಾಮಾಕ್ಷಿ ದೇವಾಲಯಗಳ ಕರಗವನ್ನು ನಗರದ ಪಂಪಿನಕೆರೆಯಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಕರಗ ಉತ್ಸವಕ್ಕೆ ಚಾಲನೆ ನೀಡಲಾಯಿತು.
ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಚಾಮಿ, ದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಉಮೇಶ್, ಕೋಟೆ ಮಾರಿಯಮ್ಮ ದೇವಾಲಯ ಕರಗವನ್ನು ಅನೀಸ್ ಮತ್ತು ಕಂಚಿ ಕಾಮಾಕ್ಷಿ ದೇವಾಲಯದ ಕರಗವನ್ನು ನವೀನ್ ಅವರು ಹೊತ್ತಿದ್ದರು. ನಂತರ ಕರಗ ಪ್ರದಕ್ಷಿಣೆ ಜರುಗಿತು.

LEAVE A REPLY

Please enter your comment!
Please enter your name here