ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಜೀವಗಳನ್ನು ರಕ್ಷಿಸೋಣ : ಜಿ.ಪಂ – ಸಿಇಓ ಡಾ. ನವೀನ್ ಭಟ್ ವೈ

0
97

ಉಡುಪಿ, ಅಕ್ಟೋಬರ್ 07 : ರಕ್ತ ನೀಡಿ ಜಗತ್ತನ್ನು ಗೆಲ್ಲಿಸಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯುತ್ತಿದ್ದು, ವರ್ಷದಲ್ಲಿ 1 ರಿಂದ 3 ಬಾರಿ ರಕ್ತದಾನವನ್ನು ಮಾಡುವುದರ ಮೂಲಕ ಪರೋಕ್ಷವಾಗಿ ಹಲವಾರು ಜೀವ ರಕ್ಷಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ ಹೇಳಿದರು.

ಅವರುಇಂದು ಮಣಿಪಾಲದ ಅನಂತನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಏಡ್ಸ್ ನಿಯಂತ್ರಣಘಟಕ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, 6ಕರ್ನಾಟಕ ನೌಕಾದಳ ಎನ್ಸಿಸಿ, ಕರ್ನಾಟಕ ರಾಜ್ಯ ನೌಕರರ ಸಂಘ, ಲಯನ್ಸ್ಕ್ಲಬ್, ಮಿಡ್ಟೌನ್ ಮತ್ತು ಯುವ ರೆಡ್ಕ್ರಾಸ್ ಘಟಕ ಹಾಗೂ ಎನ್ಎಸ್ಎಸ್ಘಟಕ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಪ್ರತಿ 100 ಜನರಲ್ಲಿ 5 ಜನರಿಗೆರಕ್ತದಕೊರತೆಕಂಡುಬರುತ್ತಿದ್ದು, ಹೆರಿಗೆ ಸಮಯದಲ್ಲಿ, ಅಪಘಾತ ಸಂಭವಿಸಿದಾಗ ಹಾಗೂ ಶಸ್ತçಚಿಕಿತ್ಸೆಯ ಸಂದರ್ಭದಲ್ಲಿ ಹೆಚ್ಚಾಗಿ ರಕ್ತದ ಅವಶ್ಯಕತೆಯಿದ್ದು,ಈ ಸಮಸ್ಯೆಗಳನ್ನು ನಿವಾರಿಸಲು ಯುವಜನತೆ ರಕ್ತದಾನ ಮಾಡುವುದರ ಮೂಲಕ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೆಪಿಸಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಬೇಕು ಎಂದರು.

ನಿಯಮಿತವಾಗಿ ರಕ್ತದಾನ ಮಾಡವುದರಿಂದ ದೈಹಿಕ ಆರೋಗ್ಯವು ಕ್ರೀಯಾಶೀಲವಾಗಿರುವುದಲ್ಲದೆ, ದೇಹದ ಸಮತೋಲನವನ್ನು ಕಾಪಾಡಬಹುದು. ಇದರಿಂದ ಯಾವುದೇ ತೊಂದರೆಗಳು ಸಂಭವಿಸುವುದಿಲ್ಲ ಆದ್ದರಿಂದ ಯುವಕರು ಸ್ವಯಂಪ್ರೇರಿತವಾಗಿ ಮುಂದೆ ಬಂದು ರಕ್ತದಾನ ಶಿಬಿರದಲ್ಲಿ ಭಾಗವಹಿಸುವುದರ ಜೊತೆಗೆ ಸದೃಢ ಸಮಾಜದ ಏಳಿಗೆಗೆ ಪಾತ್ರರಾಗಬೇಕು ಎಂದ ಅವರು ರಕ್ತದಾನದಿಂದ ಸಕಾಲದಲ್ಲಿ ಅಶಕ್ತರಿಗೆ ಆಗುವ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಸ್ವಯಂಪ್ರೇರಿತವಾಗಿ ತಾವೇ ರಕ್ತದಾನ ಮಾಡುವ ಮೂಲಕ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಮಾದರಿಯಾದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ ಮಾತನಾಡಿ, ಜಿಲ್ಲೆಯಲ್ಲಿ 2002 ರಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಹಲವಾರು ಸಂಘ ಸಂಸ್ಥೆಗಳು ಈ ಕಾರ್ಯದಲ್ಲಿ ಕೈಜೋಡಿಸಿರುವುದು ಜಿಲ್ಲೆಯಲ್ಲಿನ ಸಾಮಾಜಿಕ ಪ್ರಜ್ಞೆ ಮತ್ತು ಮಾನವೀಯ ಮೌಲ್ಯ ವನ್ನುಸೂಚಿಸುತ್ತದೆ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಮೂಲಕ ಯುವಜನತೆಗೆ ಪ್ರೇರೆಪಿಸಿದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಮಹತ್ವ ಸಿಗುತ್ತದೆ ಎಂದರು.

ಜಿಲ್ಲಾಏಡ್ಸ್ ನಿಯಂತ್ರಣಾಧಿಕಾರಿಡಾ. ಚಿದಾನಂದ್ ಸಂಜು ಎಸ್. ವಿ ಪ್ರಾಸ್ತವಿಕವಾಗಿ ಮಾತನಾಡಿದರು.

ಜಿಲ್ಲೆಯಲ್ಲಿಅತಿ ಹೆಚ್ಚುಬಾರಿರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಣಿಪಾಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಹನಾ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, 6ಕರ್ನಾಟಕ ನೌಕಾದಳ ಎನ್ಸಿಸಿ ಯ ಲೆ. ಕಮಾಂಡರ್ ರಿಕಿ ಪರೇರಾ, ಲಯನ್ಸ್ಕ್ಲಬ್ನ ಅಧ್ಯಕ್ಷ ಆನಂದ್ ಗಾಣಿಗಾ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ಹಾಗೂ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪಾಲಿಟೆಕ್ನಿಕ್ ಕಾಲೇಜಿನ ಶಿಕ್ಷಕಿ ವಂದನಾ ಆರ್.ಪಿ. ಸ್ವಾಗತಿಸಿ ಆಲಂದೂರು ಮಂಜುನಾಥ್ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here