ಧ್ಯಾನ, ಜ್ಞಾನದ ಅರಿವಿನಿಂದ ಪೂರ್ಣಪ್ರಜ್ಞರಾಗಿ ಜಗತ್ತು‌ ಗೆಲ್ಲಿ: ಸಿಎಂ ಬೊಮ್ಮಾಯಿ

0
88

ಧ್ಯಾನ, ಜ್ಞಾನದಿಂದ ಅರಿವಿನ ಪೂರ್ಣಪ್ರಜ್ಞರಾಗಿ ವಿದ್ಯಾರ್ಥಿಗಳು ಜಗತ್ತು ಗೆಲ್ಲುವ‌ ಸಾಧಕರಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಪಡುಬಿದ್ರಿ ಸಮೀಪದ ಅದಮಾರಿನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡ ನಿರ್ಮಾಣದ‌7.40ಕೋಟಿ ರೂ.ವೆಚ್ಚದ ಯೋಜನೆಗೆ ಬುಧವಾರ ಶಿಲಾನ್ಯಾಸ ನೆರವೇರಿಸಿ ವಾಸುದೇವ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು.

ಪ್ರಜ್ಞಾಶೀಲರಾಗಿರುವುದೇ ಬದುಕಿನ ಬಹುದೊಡ್ಡ ಸಾಧನೆ,ಯಾವುದೇ ಕೆಲಸ ಕಾರ್ಯಗಳಲ್ಲಿ ಪ್ರಜ್ಞಾಪೂರ್ವಕವಾಗಿ ತೊಡಗಿಸಿಕೊಳ್ಳಬೇಕು. ಆಧ್ಯಾತ್ಮಿಕ‌ ನೆಲೆಯಲ್ಲಿ ನಾನು ಯಾರು ಎನ್ನುವ ಅರಿವಿನ ಪೂರ್ಣತೆಯಿಂದಷ್ಟೇ ಜಗತ್ತಿನ ಅರಿವು ಹೊಂದಲು‌ ಸಾಧ್ಯ‌ ಎಂದರು.
ಈ ಜಗತ್ತಿನಲ್ಲಿ ನಾನು ಯಾರು, ಭೂಮಿಗೆ ಬಂದಿದ್ದೇಕೆ, ಕರ್ತವ್ಯ ಏನು? ಮಾನವನಾಗಿ ಹುಟ್ಟಿದ್ದೇಕೆ ಎನ್ನುವ ಪ್ರಶ್ನಗಳಿಗೆ ಅರಿವು, ಪೂರ್ಣಪ್ರಜ್ಞೆ ಹೊಂದಿದರೆ ಉತ್ತರ ಗಳಿಕೆ‌ ಸಾಧ್ಯ ಎಂದರು.‌

ಶಿಕ್ಷಣ‌ಸಂಸ್ಥೆಯಿಂದ ಹೊರಬಿದ್ದಾಗ ಗೌರವಿಂದ ಕಾಣುವಂತಾಗಬೇಕು. ಬಯಸದ್ದು ಬಂದಾಗ, ಅದೃಷ್ಟ ಒಲಿದಾಗ ಕರ್ತವ್ಯ ಮರೆಯಬಾರದು. ಪರಿಪೂರ್ಣ ಜ್ಞಾನ ಗಳಿಕೆಯನ್ನು ಭಕ್ತಿ, ಶ್ರದ್ಧೆಯಿಂದ ಮಾಡಬೇಕು.‌ ಗ್ರಾಮೀಣ ಮಕ್ಕಳ ವಿದ್ಯಾರ್ಜನೆಗೆ ಶಿಕ್ಷಣ ಸಂಸ್ಥೆ ಸ್ಥಾಪಿಸಿದ ಶ್ರೀವಿಬುಧೇಶತೀರ್ಥರಿಗೆ ಕೋಟಿ ಕೋಟಿ ನಮನಗಳು. ಪೂರ್ಣಪ್ರಜ್ಞ ಬ್ರ್ಯಾಂಡ್ ನೇಮ್ ವಿದ್ಯಾರ್ಥಿ ಶಕ್ತಿ, ನೈತಿಕ ಶಕ್ತಿಯಿಂದ ರೂಪುಗೊಂಡಿದೆ. ಸಮಾಜಕ್ಕೆ ಗುರು ಶ್ರೀಮಠದಿಂದ ಬಹುದೊಡ್ಡ ಕೊಡುಗೆ ಸಂದಿದೆ. ಶಿಕ್ಷಣ‌ ಸಂಸ್ಥೆಯಲ್ಲಿ‌ ಪಾಠ, ಓದು, ಪರೀಕ್ಷೆಯಿದ್ದರೆ ಬದುಕಿನಲ್ಲಿ ಪರೀಕ್ಷೆ ಎದುರಿಸಿ‌ ಪಾಠ ಕಲಿಯಬೇಕಿದೆ. ವಿದ್ಯಾರ್ಥಿಯಾದವನ ಬದುಕಿನುದ್ದಕ್ಕೂ ಕಲಿಕೆ ನಿರಂತರವಾಗಿರಬೇಕು‌ ಎಂದು ಬೊಮ್ಮಾಯಿ ನುಡಿದರು.

ಯಾವುದೇ ವಿಷಯವನ್ನು ಪ್ರಶ್ನಿಸುವ ಲಾಜಿಕಲ್ ಚಿಂತನೆಯಿಂದ ತಾರ್ಕಿಕ ಉತ್ತರ ಕಂಡುಕೊಳ್ಳಬೇಕು.‌ಜಯ ಅಪಜಯ ನಮ್ಮೊಳಗಿದ್ದು ಆತ್ಮವಿಶ್ವಾದಿಂದ ಮುನ್ನುಗ್ಗಿ
ಪೂರ್ಣಪ್ರಜ್ಞೆಯ ಅರಿವೇ ಗುರು ಎಂದು ಹೇಳಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ , ಕೆ.ರಘುಪತಿ ಭಟ್, .ಗ್ರಾ.ಪಂ.ಅಧ್ಯಕ್ಷೆ ಕಸ್ತೂರಿ ಪ್ರವೀಣ್, ಡಾ.ಜಿ.ಎಸ್.ಚಂದ್ರಶೇಖರ್, ಎಂ. ರಾಮಕೃಷ್ಣ ಪೈ, ಡಾ.ಒಲ್ವಿಟಾ ಡಿಸೋಜ ಉಪಸ್ಥಿತರಿದ್ದರು.

ಅನನ್ಯಾ, ಭಾರತಿ, ಶ್ರೀವಾಣಿ, ಹರ್ಷ ಪ್ರಾರ್ಥಿಸಿದರು. ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಸ್ವಾಗತಿಸಿದರು.‌ ಡಾ.ಜಯಶಂಖೃಕಂಗಣ್ಣಾರು ನಿರೂಪಿಸಿ, ಅದಮಾರು ಪೂರ್ಣಪ್ರಜ್ಞ ಸಂಸ್ಥೆಗಳ ಕಾರ್ಯದರ್ಶಿ ಪ್ರವೀಣ್ ಕುಮಾರ್ ವಂದಿಸಿದರು.

ಹೆತ್ತವರ ಪ್ರೇರಣೆಯಿಂದ ಸಂಕಲ್ಪ ಕೈಗೊಳ್ಳಿ…
ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಏರಿದ ತೇನ್ ಸಿಂಗ್ ಹಿಮಾಲಯದ ತಪ್ಪಲಲ್ಲಿ ಕುರಿ ಕಾಯುತ್ತಾ ತನ್ನ 10ನೇ ವಯಸ್ಸಿಗೆ ತಾಯಿ ನೀಡಿದ ಪ್ರೇರಣೆಯಿಂದ 42ನೇ ವಯಸ್ಸಿಗೆ ಮೊದಲ ಬಾರಿ ಮೌಂಟ್ ಎವರೆಸ್ಟ್ ಏರಿದ ಸಾಧನೆ ಮಾಡಿದ, ತ್ರಿವರ್ಣ ಧ್ವವೂರಿದ‌. 10ನೇ ವಯಸ್ಸಿಗೆ ಕೈಗೊಂಡ ಸಂಕಲ್ಪದಿಂದ ಸಾಧನೆ ಸಾಧ್ಯವಾದಂತೆ ವಿದ್ಯಾರ್ಥಿಗಳು ಬದುಕಿನ ಸಾಧನೆಯ ಸಂಕಲ್ಪವನ್ನು ಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು.

LEAVE A REPLY

Please enter your comment!
Please enter your name here