ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ; ಎಸ್.ಬಿ ವಸ್ತ್ರಮಠ್

0
90

ಮಂಡ್ಯ..ಅ.21- ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಟ ಮಾಡಿ ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ನಾವು ಸ್ಮರಿಸೋಣ ಎಂದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ ವಸ್ತ್ರಮಠ್ ಹೇಳಿದರು.
ಇಂದು ನಗರದ ಪೆÇಲೀಸ್ ಪರೇಡ್ ಮೈದಾನದಲ್ಲಿ ನಡೆದ ಪೆÇಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
1959ರ ಅ.21ರಂದು ಚೀನಾ-ಭಾರತ ಗಡಿ ಭಾಗದ ಹಾಟ್ ಸ್ಟ್ರೀಗ್ ಪೋಸ್ಟ್ ಹತ್ತಿರ ಸಿಆರ್‍ಪಿಎಫ್ ಡಿಎಸ್‍ಪಿ ಕರಣಸಿಂಗ್ ನೇತೃತ್ವದಲ್ಲಿ ಪೆÇಲೀಸ್ ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಚೀನಾ ಸೈನಿಕರಿಂದ ಏಕಾಏಕಿ ದಾಳಿ ನಡೆಸಿದ ಪರಿಣಾಮ ಪ್ರಾಣ ತೆತ್ತ 10 ಭಾರತೀಯ ಪೆÇಲೀಸ್ ಯೋಧರ ಬಲಿದಾನದ ಸ್ಮರಣೆ ಪ್ರತೀಕವಾಗಿ ಪ್ರತಿ ವರ್ಷ ಅ.21ರಂದು ದೇಶಾದ್ಯಂತ ಎಲ್ಲ ಜಿಲ್ಲಾ ಪೊಲೀಸ್ ಕೇಂದ್ರ ಸ್ಥಾನಗಳಲ್ಲಿ ಪೊಲೀಸ್ ಹುತಾತ್ಮರ ದಿನ ಆಚರಿಸಲಾಗುತ್ತದೆ ಇದೊಂದು ದುಃಖದ ಸಂಗತಿ ಎಂದು ತಿಳಿಸಿದರು.
ನಮ್ಮಲ್ಲಿ ಪೊಲೀಸ್ ದಳಕ್ಕೆ ಹೆಚ್ಚಿನ ಭದ್ರತೆಯುಳ್ಳ ಆಧುನಿಕ ಶಸ್ತ್ರಾಸ್ತ್ರಗಳನ್ನು ನೀಡಬೇಕಾಗಿದೆ ಯಾಕೆಂದರೆ ಆ ದುರ್ಘಟನೆ ನಡೆದ ದಿನ ಎದುರಾಳಿ ಸೈನಿಕರ ಬಳಿ ಇದ್ದಂತಹ ಪ್ರಬಲವಾದ ವೆಪನ್ಸ್ ನಮ್ಮವರ ಬಳಿ ಇರಲಿಲ್ಲ ಎಂದರು.
ದೇಶ ಮುಖ್ಯ ದೇಶಪ್ರೇಮ ಮುಖ್ಯ ದೇಶ ಚೆನ್ನಾಗಿದ್ದರೆ ಮಾತ್ರ ನಾವು ಚೆನ್ನಾಗಿರಲು ಸಾಧ್ಯ ಎಂದರು.
ದೇಶ ರಕ್ಷಕರು ತಮ್ಮ ಕರ್ತವ್ಯದಲ್ಲಿ ತೊಡಗಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆ, ನಾಗರಿಕ ಆಸ್ತಿ, ಪಾಸ್ತಿ ರಕ್ಷಣೆ, ಅಪರಾಧ ತಡೆ ಮತ್ತು ಹಲವು ಕರ್ತವ್ಯ ಪಾಲನೆಗಳಲ್ಲಿ ಸದಾ ನಿರತರಾಗಿ ಸಮಾಜದ ಸುರಕ್ಷತೆಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆನಪು ಮಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದರು.
ಜೊತೆಗೆ ದೇಶಕ್ಕಾಗಿ ಪ್ರಾಣವನ್ನು ಮುಡಿಪಿಟ್ಟ ಸಾಕಷ್ಟು ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ನೆನೆಯಬೇಕು ಎಂದು ಹೇಳಿದ ಅವರು ಮುಂಚೂಣಿ ಹೋರಾಟಗಾರರಾದ ಚಂದ್ರಶೇಖರ್ ಆಜಾದ್ ರವರ ಹೋರಾಟದ ಹಾದಿಯನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರಕ್ಷಕ ಅಧೀಕ್ಷಕರಾದ ಎಂ.ಅಶ್ವಿನಿ, ಜಿಲ್ಲಾ ಅಪರ ಆರಕ್ಷಕ ಅಧೀಕ್ಷಕರಾದ ವಿ.ಧನಂಜಯ ಹಾಗೂ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here