ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ

0
77

ರಾಮನಗರ, ಅ.೨೧ : ರಾಮನಗರ ತಾಲ್ಲೂಕು, ವಡ್ಡರಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಛೇರಿ ಆವರಣದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಸಂಘದ ವತಿಯಿಂದ ಪೌಷ್ಠಿಕ ಆಹಾರ ಮೇಳ ಆಯೋಜಿಸಿ ಪೌಷ್ಠಿಕ ಆಹಾರ ಪ್ರದರ್ಶನ ಮತ್ತು ಉತ್ತಮ ಪೌಷ್ಠಿಕ ಆಹಾರ ತಯಾರಿಸದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ನಂತರ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಪೋಷಕಾಂಶ ಆಹಾರ ಸೇವನೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು ಎಲ್ಲರೂ ಪೌಷ್ಠಿಕ ಆಹಾರವನ್ನು ಸೇವನೆ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಾ ಇದರ ಮುಖ್ಯ ಉದ್ದೇಶ ಮನುಷ್ಯನ ಆರೋಗ್ಯ ವೃದ್ಧಿಗೆ ಪೋಷಕಾಂಶಗಳ ಮಹತ್ವ ಕುರಿತು ಅರಿವು ಮೂಡಿಸುವುದು. ಇದರಿಂದ ಮಕ್ಕಳು, ಗರ್ಭಿಣಿ, ಬಾಣಂತಿ, ಹದಿ-ಹರೆಯದವರು, ಅಪೌಷ್ಟಿಕತೆ, ರಕ್ತ ಹೀನತೆ ಮತ್ತು ಇತರೆ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಮನುಷ್ಯನ ಜೀವನದಲ್ಲಿ ಪೌಷ್ಠಿಕ ಆಹಾರ ಬಹಳ ಮುಖ್ಯವಾಗಿದ್ದು ಸ್ಥಳೀಯವಾಗಿ ದೊರೆಯುವಂತಹ ಪೌಷ್ಠಿಕ ಆಹಾರ ಪದಾರ್ಥಗಳಾದ ಸಿರಿ-ಧಾನ್ಯ, ಹಸಿರುಸೊಪ್ಪು, ತರಕಾರಿ, ಹಣ್ಣುಗಳು, ಬೇಳೆಕಾಳು, ಮೊಳಕೆಕಾಳು, ಹಾಲು, ಮೊಟ್ಟೆ, ಮೀನು, ಮಾಂಸ ಇವುಗಳನ್ನು ಬಳಸುವುದರಿಂದ ಉತ್ತಮ ಆರೋಗ್ಯ ಜೊತೆಗೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ ರೋಗಗಳಿಂದ ರಕ್ಷಣೆ ಪಡೆಯಬಹುದು ಆದ್ದರಿಂದ ಪ್ರತಿ ಕುಟುಂಬ ಪೌಷ್ಠಿಕ ಆಹಾರ ಸೇವಿಸ ಬೇಕೆಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾ ಅಧಿಕಾರಿ ಸೂರ್ಯನಾರಾಯಣ್, ಸಮನ್ವಯ ಅಧಿಕಾರಿ ಚಂದ್ರಮ್ಮ, ಹಾಲಿನ ಡೈರಿ ಅಧ್ಯಕ್ಷರಾದ ನಾಗರಾಜು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿನಯ್ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ರಾಧ, ಸೇವಾ ಪ್ರತಿನಿಧಿ ಕಾವ್ಯ, ಆರೋಗ್ಯ ಸಿಬ್ಬಂದಿ, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರಿಶಕ್ತಿ ಮತ್ತು ಜ್ಞಾನವಿಕಾಸ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here