ಸರಳವಾಗಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲು ನಿರ್ಧಾರ

0
94

ಕಲಬುರಗಿ: ಅ.21.-ಕೋವಿಡ್ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇದೇ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ತಿಳಿಸಿದರು.
ಅವರು ಗುರುವಾರ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ, ಜಯಂತಿ ದಿನದಂದು ಮೆರವಣಿಗೆಗೆ ಅವಕಾಶ ಇರುವುದಿಲ್ಲ. ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಗೀತ ಕಾರ್ಯಕ್ರಮ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲು ನಿರ್ಧರಿಸಲಾಗಿದೆ. ಇದೇ ಸಂದರ್ಭದಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಓರ್ವ ಉಪನ್ಯಾಸರನ್ನು ಸಹ ಆಯ್ಕೆ ಮಾಡಲಾಯಿತು.
ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಬೇಕು. ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಜಯಂತಿಗಳು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಶಿರಸ್ತೇದಾರರಾದ ಉದಯಕುಮಾರ ಪಾಟೀಲ ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ ಕಚೇರಿ ಸಹಾಯಕ ಆಡಳಿತಾಧಿಕಾರಿ ನೀಲಕಂಠ ರಾಯ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಚೇರಿ ಅಧೀಕ್ಷಕ ಮಹೇಶ, ವೀರಶೈವ ಸಮಾಜದ ಜಿಲ್ಲಾಧ್ಯಕ್ಷರಾದ ಅರಣುಕುಮಾರ ಕುಮಾರ, ಸಮಾಜದ ಮುಖಂಡರಾದ ಆರ್.ಜಿ. ಶೆಟ್ಟಗಾರ, ಸೋಮಶೇಖರ ಹಿರೇಮಠ, ರಾಜುಗೌಡ ನಾಗನಳ್ಳಿ ಮತ್ತಿತರ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here