ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆ

0
86

ಮಡಿಕೇರಿ ಅ.22 :-ಕನ್ನಡ ರಾಜ್ಯೋತ್ಸವಕ್ಕೆ ಪೂರಕವಾದ ಕನ್ನಡಕ್ಕಾಗಿ ನಾನು ಆಂದೋಲನ ಸಮರ್ಪಕವಾಗಿ ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸುವ ಬಗ್ಗೆ ನಗರದ ಜಿ.ಪಂ.ಶಾಸಕರ ಕಚೇರಿಯಲ್ಲಿ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು.
ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆ ನಡೆಯಿತು.
ಈ ಸಂದರ್ಭ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಅವರು ಮಾತನಾಡಿ ಸರ್ಕಾರದ ಆದೇಶದಂತೆ ಕನ್ನಡ ರಾಜ್ಯೋತ್ಸವಕ್ಕೂ ಮುಂಚಿತವಾಗಿ ಆ.24 ರಿಂದ 31 ರವರೆಗೆ ಜಿಲ್ಲೆಯ ವಿವಿದೆಡೆ ಸಾಂಸ್ಕೃತಿಕ ಕಾರ್ಯಕ್ರಮ ಅಯೋಜಿಸುವಂತೆ ಈ ತಿಂಗಳು 28 ರಂದು ಏಕಕಾಲದಲ್ಲಿ ಬೆಳಗ್ಗೆ 11 ಗಂಟೆಗೆ ಸರ್ಕಾರ ಸೂಚಿಸಿರುವ ನಾಡಗೀತೆಯಾಗಿರುವ “ಜಯ ಭಾರತ ಜನನಿಯ ತನುಜಾತೆ” ಡಾ.ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ”, ಡಾ.ಕೆ.ಎಸ್.ನಿಸಾರ್ ಅಹಮದ್ ರವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖರವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಈ ನಾಲ್ಕು ಗೀತೆಗಳನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಹಾಡುವಂತೆ ಹಾಗೂ ಸುಮಾರು ನಾಲ್ಕೈದು ನಿಮಿಷಗಳ ಕಾಲ ನಿರರ್ಗಳವಾಗಿ ಅನ್ಯ ಭಾಷೆಯ ಪದಗಳನ್ನು ಬಳಸದೆ ಕೇವಲ ಕನ್ನಡ ಪದಗಳನ್ನೇ ಬಳಸಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸುವುದು. ಯಾವುದಾದರೊಂದು ವಿಷಯದ ಕುರಿತು ಹೀಗೆ ಮಾತನಾಡಿದ ಸ್ಪರ್ಧಿಗಳಿಗೆ ಜಿಲ್ಲಾವಾರು ಮತ್ತು ರಾಜ್ಯ ಮಟ್ಟದಲ್ಲಿ ಪ್ರಮಾಣ ಪತ್ರ ಹಾಗೂ ಬಹುಮಾನ ನೀಡುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯ ಎಸ್.ಮಹೇಶ್ ಮಾತನಾಡಿ ಜಿಲ್ಲೆಯ 5 ತಾಲೂಕಿನ ವ್ಯಾಪ್ತಿಯಲ್ಲೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುವಂತೆಯೂ, ಸಮೂಹ ಗಾಯನವನ್ನು ಕೆಲವು ಶಾಲಾ ಕಾಲೇಜುಗಳಲ್ಲಿ ಮಾತ್ರ ಆಯೋಜಿಸದೆ ವಿವಿಧ ಸಂಘ ಸಂಸ್ಥೆಗಳ ಹಾಗೂ ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಏರ್ಪಡಿಸುವಂತೆ ತಿಳಿಸಿದರು.
ಸಮಿತಿಯ ಮತೋರ್ವ ಸದಸ್ಯ ರಂಜಿತಾ ಕಾರ್ಯಪ್ಪ ಮಾತನಾಡಿ ಗಡಿಗ್ರಾಮದಲ್ಲಿ ಕನ್ನಡ ಜಾಗೃತಿಗೊಳಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ತಿಳಿಸಿದರು.
ಸಮಿತಿ ಸದಸ್ಯರಾದ ಇ.ರಾಜು ಹಾಗೂ ಭಾರತಿ ರಮೇಶ್ ಮಾತನಾಡಿ ಜಿಲ್ಲಾ ಕೇಂದ್ರ ಮಡಿಕೇರಿ ಹಾಗೂ ಹೊಸ ತಾಲೂಕು ಕೇಂದ್ರ ಕುಶಾಲನಗರದಲ್ಲೂ ಸಾರ್ವಜನಿಕ ಸ್ಥಳದಲ್ಲಿ ಸಮೂಹ ಗಾಯನ ಆಯೋಜಿಸುವ ಮೂಲಕ ಕನ್ನಡ ಮನಸ್ಸುಗಳನ್ನು ಜಾಗೃತಗೊಳಿಸಬೇಕು ಎಂದು ಅವರು ಸಲಹೆ ಮಾಡಿದರು.
ಚರವಾಣಿಯ ಮೂಲಕ ನಡೆಸುವ ಸ್ಪರ್ಧೆಗೆ ನಿಬಂಧನೆಗಳನ್ನು ವಿಧಿಸಿ ಒಂದೊಂದು ತಾಲೂಕಿನ ಸ್ಪರ್ಧಿಗಳು ತಮ್ಮ ದೃಶ್ಯ ಮುದ್ರಿಕೆಗಳನ್ನು ಕಳುಹಿಸಲು ಒಬ್ಬೊಬ್ಬರ ಚರವಾಣಿ ಸಂಖ್ಯೆಯನ್ನು ನೀಡುವಂತೆ ಕಾಜೂರು ಸತೀಶ್ ತಿಳಿಸಿದರು. ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here