ಕಾರ್ಯಕರ್ತರೇ ಪಕ್ಷದ ಶಕ್ತಿ ಇದ್ದಂತೆ, ಭಾಜಪ ರಾಜ್ಯ ಉಪಾಧ್ಯಕ್ಷ ‌ಬಿ.ವೈ.ವಿಜಯೇಂದ್ರ.!

0
84

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಜ್ನಾನ ಭಾರತಿ ಕಾಲೇಜ್ ಆವರಣದಲ್ಲಿ ಭಾಜಪ ಜಿಲ್ಲಾ ಕಾರ್ಯಕಾರಣಿ ಸಭೆಗೆ ಚಾಲನೆ ನೀಡಲಾಯಿತು. ಸರ್ಕಾರದ ಸಾಧನೆಗಳನ್ನು ಹಾಗೂ ಜನಪರ ಕಾರ್ಯಕ್ರಮಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವಲ್ಲಿ ಕಾರ್ಯಕರ್ತರ ಶ್ರಮ ಅಡಗಿದೆ. ಬರುವ ದಿನಗಳಲ್ಲಿ ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸೋಣ ಎಂದು ಕರೆ ನೀಡಿದರು.

ಮಾಜಿ ಸಿ.ಎಂ.ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಮಾದರಿ ರೀತಿಯಲ್ಲಿ ಆಡಳಿತ ನಡೆಸಿದ್ದು, ಎಲ್ಲ ವರ್ಗದವರ ಅಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ದೂರದೃಷ್ಟಿ ಇಟ್ಟು ಕೊಂಡು ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ, ಅವರ ಕೊಡುಗೆ, ಶ್ರಮ ಅಪಾರವಿದೆ. ಸಿ.ಎಂ.ಬಸವರಾಜ್ ‌ಬೊಮ್ಮಾಯಿ ಅವರು ಉತ್ತಮ ಆಡಳಿತ ನಡೆಸುತ್ತಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಪ್ರತಿಯೋಬ್ಬರೂ ಕೈಜೋಡಿಸಬೇಕು, ಅಧಿಕಾರವಹಿಸಿಕೊಂಡ ಬಳಿಕ ದೇಶಕ್ಕೆ ಅನ್ನ ನೀಡುವ ರೈತರಿಗೆ ಅನೇಕ ಯೋಜನೆಗಳನ್ನು ಘೋಷಿಸಿ ಇತರರಿಗೆ ಮಾದರಿಯಾಗಿದ್ದಾರೆ, ರಾಜ್ಯದಲ್ಲಿ ಮತ್ತೋಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೋಬ್ಬರೂ ಶ್ರಮಿಸೊಣ ಎಂದು ಕರೆ ನೀಡಿದರು. ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಭಾಜಪ ಅಭ್ಯರ್ಥಿಗಳಿಗೆ ಆಭೂತಪೂರ್ವ ಬೆಂಬಲ ದೊರೆತಿದೆ, ಪ್ರಚಾರಕ್ಕೆ ತೆರಳಿದ ಎಲ್ಲ ಕಡೆಗಳಲ್ಲೂ ಜನರಿಂದ ಭವ್ಯ ಸ್ವಾಗತ ದೊರೆಯುತ್ತಿದೆ. ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಜನರ ವಿಶ್ವಾಸ ಕಳೆದುಕೊಂಡಿದ್ದು, ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಇದಕ್ಕೂ‌ ಮುನ್ನ ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಸೇರಿದಂತೆ ‌ನಾನಾ‌ ವಿಷಯಗಳ ಕುರಿತು ಚೆರ್ಚೆಗಳು‌ ನಡೆದವು.

ಈ ಸಂದರ್ಭದಲ್ಲಿ ಭಾಜಪ
ರಾಜ್ಯ ಕಾರ್ಯದರ್ಶಿ ನವೀನ್, ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಶಾಸಕರಾದ ಎನ್.ವೈ‌. ಗೋಪಾಲಕೃಷ್ಣ, ಎಂ.ಎಸ್. ಸೋಮಲಿಂಗಪ್ಪ, ಗಾಲಿ ಕರುಣಾಕರ ರೆಡ್ಡಿ, ಗಾಲಿ ಸೋಮಶೇಖರ ರೆಡ್ಡಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ಹನುಮಂತಪ್ಪ, ಮಾಜಿ ಸಂಸದೆ ಜೆ.ಶಾಂತಾ, ಮಾಜಿ ಶಾಸಕರಾದ ಚಂದ್ರನಾಯ್ಕ್, ನೇಮರಾಜ್ ನಾಯ್ಕ್, ರಾಷ್ಟ್ರೀಯ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಾಜ್ಯ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶಿವಕೃಷ್ಣಮ್ಮ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸಂಜಯ್, ಪಾರ್ವತಿ ಇಂದುಶೇಖರ್, ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಎಸ್. ಗುರುಲಿಂಗನಗೌಡ, ಜಿಲ್ಲಾಧ್ಯಕ್ಷ ಐನಾಥ್ ರೆಡ್ಡಿ, ರಾಜ್ಯ ಸಹಕಾರಿ ಪ್ರಕೋಷ್ಠ ಸಹ ಸಂಚಾಲಕ ನಂಜನಗೌಡ್ರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪಿ. ಪೂಜಪ್ಪ, ಮುಖಂಡರಾದ ಡಾ. ಮಹಿಪಾಲ್, ಗುತ್ತಿಗನೂರು ವಿರುಪಾಕ್ಷಗೌಡ, ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ್, ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಕೆ.ಎಸ್.ಆರ್. ಟಿ.ಸಿ ನಿಗಮದ ನಿರ್ದೇಶಕ ಅರುಂಡಿ ನಾಗರಾಜ್, ಬುಡಾ ಅಧ್ಯಕ್ಷ ಕಾರ್ಕಲತೋಟ ಪಿ. ಪಾಲಣ್ಣ, ಮಾಜಿ ಅಧ್ಯಕ್ಷ‌ ದಮ್ಮೂರ್ ಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ರಮೇಶ್, ಅನಿಲ್ ನಾಯ್ಡು, ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವರದಿ:-ಮಂಜುನಾಥ್. ಹೆಚ್

LEAVE A REPLY

Please enter your comment!
Please enter your name here