ಅ.28 ರಂದು ‘ಗೀತಾ ಗಾಯನ’ ಕಾರ್ಯಕ್ರಮ ಸಹಕಾರಕ್ಕೆ ಎಡಿಸಿ ಮನವಿ

0
115

ಮಡಿಕೇರಿ ಅ.26 :-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ‘ಕನ್ನಡಕ್ಕಾಗಿ ನಾವು’ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಅಂಗವಾಗಿ ಅಕ್ಟೋಬರ್, 24 ರಿಂದ 31 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆ ನಿಟ್ಟಿನಲ್ಲಿ ಅಕ್ಟೋಬರ್, 28 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ‘ಗೀತಾ ಗಾಯನ’ ಕನ್ನಡ ಹಾಡುಗಾರಿಕೆ ಕಾರ್ಯಕ್ರಮ ಜರುಗಲಿದ್ದು, ಇದಕ್ಕಾಗಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಕನ್ನಡ ಸಂಸ್ಥೆಗಳ ಪ್ರಮುಖರ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಕ್ಟೋಬರ್, 24 ರಿಂದ 31 ರವರೆಗೆ ಕನ್ನಡ ರಾಜ್ಯೋತ್ಸವ ಸಂಬಂಧ ಕನ್ನಡ ಗೀತಾ ಗಾಯನ, ಜಾನಪದ ಹಾಡುಗಾರಿಕೆ, ಸುಗಮ ಸಂಗೀತ, ದೇಶ ಭಕ್ತಿ ಗೀತೆ, ಸಮೂಹ ನೃತ್ಯ ಹೀಗೆ ವಿವಿಧ ಕಾರ್ಯಕ್ರಮಗಳನ್ನು ವಿವಿಧ ಕಡೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಆ ದಿಸೆಯಲ್ಲಿ ಅಕ್ಟೋಬರ್, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ರಾಜಾಸೀಟು, ಭಾಗಮಂಡಲ ಭಗಂಡೇಶ್ವರ ದೇವಾಲಯ ಆವರಣ, ತಲಕಾವೇರಿ ಬಳಿ, ನಿಸರ್ಗಧಾಮ, ದುಬಾರೆ, ಈ ಸ್ಥಳಗಳಲ್ಲಿ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಜೋಗದ ಸಿರಿ ಬೆಳಕಿನಲ್ಲಿ’, ಬಾರಿಸು ಕನ್ನಡ ಡಿಂಡಿಮವ’ ಹಾಡುಗಳನ್ನು ಹಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸಾರ್ವಜನಿಕರು ಪಾಲ್ಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕøತಿ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಅವರು ಮಾಹಿತಿ ನೀಡಿ ಕನ್ನಡ ರಾಜ್ಯೋತ್ಸವವನ್ನು ಕನ್ನಡಕ್ಕಾಗಿ ನಾವು ಎಂಬ ಶೀರ್ಷಿಕೆಯಡಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅಕ್ಟೋಬರ್, 28 ರಂದು ಬೆಳಗ್ಗೆ 11 ಗಂಟೆಗೆ ಸಾಮೂಹಿಕ ಗಾಯನವನ್ನು ನಗರದ ರಾಜಾಸೀಟಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಜಿಲ್ಲಾದ್ಯಾಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಕೊಡಗು ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಕಾರ್ಯಕ್ರಮ ಯಶಸ್ಸಿಗೆ ಹೆಚ್ಚಿನ ಸಂಘಟನೆ ಅಗತ್ಯ ಎಂದು ಸಲಹೆ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಗೀತಾಗಾಯನ ಸಂದರ್ಭದಲ್ಲಿ ಗೀತಾಗಾಯನ ನಡೆಸಿಕೊಡುವವರು ತರಬೇತಿ ಪಡೆದಿರಬೇಕು. ಒಳ್ಳೆಯ ಗಾಯಕರನ್ನು ಆಹ್ವಾನಿಸುವಂತೆ ಸಲಹೆ ಮಾಡಿದರು. ರಾಜಾಸೀಟಿನಲ್ಲಿ ಮಳೆ ಬಂದರೆ ಪರ್ಯಾಯ ಸ್ಥಳ ಕಾಯ್ದಿರಿಸಬೇಕು ಎಂದರು.
ಮದೆ ಮಹದೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ಸಿದ್ದರಾಜು ಬೆಳ್ಳಯ್ಯ ಅವರು ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಗೀತಾಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ರವಿಗೌಡ, ಮಡಿಕೇರಿ ನಗರ ಅಧ್ಯಕ್ಷರಾದ ದೇವೂಜಿ, ಉಪಾಧ್ಯಕ್ಷರಾದ ಜಿ.ಎನ್.ಭರತ್ ಅವರು ಗೀತಾಗಾಯನ ಕಾರ್ಯಕ್ರಮ ಸಂಬಂಧಿಸಿದಂತೆ ಹಲವು ಸಲಹೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಧನಂಜಯ ಅಗೋಳಿಕಜೆ, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಭಾರತಿ ರಮೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ದಮಯಂತಿ, ರಂಜನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್, ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಾದ ಗೀತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಂಜುನಾಥ್ ಇತರರು ಇದ್ದರು.

LEAVE A REPLY

Please enter your comment!
Please enter your name here