ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ನದಿನದ ನಿಮಿತ್ತ ರಾಷ್ಟ್ರೀಯ ಏಕತಾ ದಿನ ಆಚರಣೆ.

0
92

ಕಲಬುರಗಿ:ಅ.31:
ದಿವಂಗತ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದರು.

ನಂತರ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರಣ್ಣ ವಣಿಕ್ಯಾಳ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಜರಿದ್ದರು.

LEAVE A REPLY

Please enter your comment!
Please enter your name here