ಹೂಡೇಂ ಗ್ರಾಮ ಪಂಚಾಯಿತಿ ವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವ ಆಚರಣೆ.!

0
118

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿಯಲ್ಲಿ (ನ,೦೧) ೬೬ನೇ ಕನ್ನಡ ರಾಜ್ಯೋತ್ಸವ ಸರಳ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಕೆ ಎನ್ ರಾಘವೇಂದ್ರ ಮಾತನಾಡಿ. ಇಂದು ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1 ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿಕಾರಿ ಮಾರೇಶ್, ಗ್ರಾ.ಪಂ ಅಧ್ಯಕ್ಷೆ ಕರಿಬಸಮ್ಮ- ದುರುಗಪ್ಪ, ಕಾರ್ಯದರ್ಶಿ ಚಂದ್ರಣ್ಣ, ಸದಸ್ಯರುಗಳು ರಾಮಚಂದ್ರಪ್ಪ, ಯಲ್ಲಪ್ಪ, ಪುಟ್ಟಮ್ಮ-ಮಲ್ಲಿಕಾರ್ಜುನ್, ಅನು-ಗದ್ದಿಗೇಶ್, ಕಾಟಯ್ಯ, ಸೇರಿದಂತೆ ಎಲ್ಲಾ ಸದಸ್ಯರುಗಳು, ಬಿಲ್ ಕಲೆಕ್ಟರ್ ತಿಪ್ಪೆರುದ್ರಪ್ಪ, ಗ್ರಂಥಾಲಯ ಮೇಲ್ವಿಚಾರಕರು ಗುರುರಾಜ್, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ:-ಮಂಜುನಾಥ್. ಹೆಚ್

LEAVE A REPLY

Please enter your comment!
Please enter your name here