ನವೆಂಬರ್ 8 ರಿಂದ ಡಿಸೆಂಬರ್ 5 ರವರೆಗೆ ಜಿಲ್ಲೆಯಾದ್ಯಂತ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ.

0
159

ಮಂಡ್ಯ. ನ 04:- ಮಂಡ್ಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಹಾಲು ಒಕ್ಕೂಟ (ಮನ್‌ಮುಲ್) ಇವರ ಸಹಕಾರದೊಂದಿಗೆ ನವೆಂಬರ್ 8 ರಿಂದ ಡಿಸೆಂಬರ್ 5 ರವರೆಗೆ ಜಿಲ್ಲೆಯಾದ್ಯಂತ ಎಲ್ಲಾ ದನ, ಎಮ್ಮೆಗಳಿಗೆ ಉಚಿತವಾಗಿ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮಡಿಯಲ್ಲಿ 2 ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವಾಗಿದ್ದು, ಈ ಲಸಿಕಾ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 279 ಲಸಿಕೆದಾರರು (ಸಿಬ್ಬಂದಿ) ನಿಯೋಜಿಸಿದ್ದು, ಗ್ರಾಮವಾರು ದಿನಾಂಕಗಳನ್ನು ಸಂಬಂಧಪಟ್ಟ ತಾಲ್ಲೂಕು ಪಶುವೈದ್ಯ ಆಸ್ಪತ್ರೆಗಳು, ಪಶುಚಿಕಿತ್ಸಾಲಯ, ಗ್ರಾಮ ಪಂಚಾಯಿತಿ ಹಾಗೂ ಎಂ.ಪಿ.ಸಿ.ಎಸ್. ಗಳಲ್ಲಿ ಪ್ರಕಟಿಸಲಾಗುವುದು.

ಎಲ್ಲಾ ಪಶುಪಾಲಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ರಾಸುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಜಾನುವಾರುಗಳನ್ನು ರಕ್ಷಿಸಿ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು
ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here