ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ.

0
107

ದಾವಣಗೆರೆ.ನ.08 :ನಗರದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಪಂಚಾಯತ್ ಜಿಲ್ಲಾ ಉಪಕಾರ್ಯದರ್ಶಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದದ್ರ ಜಂಟಿ ನಿರ್ದೇಶಕ ಆನಂದ್.ಬಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಕೋವಿಡ್-19ರ ಕ್ಲಿಷ್ಠಕರ ಪರಿಸ್ಥಿಯಲ್ಲೂ ಉದ್ಯಮದಾರರಬೇಕೆಂಬ ಹಂಬಲದಿಂದ ತರಬೇತಿ ಪಡೆಯಲು ಆಗಮಿಸಿರುವ ಎಲ್ಲಾ ಶಿಬಿರಾರ್ಥಿಗಳನ್ನು ಅಭಿನಂದಿಸಿದರು. ಹಾಗೂ ಉದ್ಯಮದಾರರಾಗುವ ಹಂತದಲ್ಲಿ ಎದುರಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ಸಲಹೆಗಳನ್ನು ನೀಡುವ ಮೂಲಕ ಶಿಬಿರಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಬಿ.ಐ.ಇ.ಟಿ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಮಾನವೇಂದ್ರ ಅವರು ಮಾತನಾಡಿ, ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡು ಯಶಸ್ವಿ ಉದ್ಯಮದಾರರಾಬೇಕೆಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಹೇಶ್ವರಪ್ಪ ಕೆ.ಎನ್, ಸಂಪನ್ಮೂಲ ವ್ಯಕ್ತಿಯಾಗಿ ಜನ ಶಿಕ್ಷಣ ಸಂಸ್ಥಾನದ ನಿವೃತ್ತ ನಿರ್ದೇಶಕ ಮುಕುಂದಪ್ಪ ಬಿ ಇವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here