ಬಂಡ್ರಿ ಕೆಪಿಎಸ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಸಿಹಿ-ಚಾಕೋಲೇಟ್, ಹಾಗೂ ಆರತಿ ಬೆಳಗುವುದರ ಮೂಲಕ ಸ್ವಾಗತ..!

0
151

ಸಂಡೂರು/ಬಂಡ್ರಿ:ನ:09:-ಸುಮಾರು ಒಂದೂವರೆ ವರ್ಷಗಳ ನಂತರ ಬಂಡ್ರಿ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ 08.11.2021ರಂದು ಆರಂಭವಾದ ಎಲ್ ಕೆ ಜಿ ಮತ್ತು ಯು ಕೆ ಜಿ ತರಗತಿಗಳಿಗೆ ಆಗಮಿಸಿದ, ಪುಟಾಣಿ ಮಕ್ಕಳಿಗೆ ಪ್ರಾಂಶುಪಾಲರು/ಮುಖ್ಯಗುರುಗಳು ಮತ್ತು ಸಿಬ್ಬಂದಿ ವರ್ಗದವರು ಸಿಹಿ-ಚಾಕೋಲೇಟ್, ನೀಡಿ, ಆರತಿಯನ್ನು ಬೆಳಗುವುದರ ಮೂಲಕ ಪ್ರೀತಿಯಿಂದ ಸ್ವಾಗತಿಸಿದರು.

ಬಂಡ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಪಿಎಸ್ ಶಾಲೆಯಲ್ಲಿ ಬಲೂನು,ತಳಿರು ತೋರಣಗಳಿಂದ ಸಿದ್ಧಪಡಿಸಿದ್ದ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿಕ್ಷಣ ಪ್ರೇಮಿ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ನಾಗರಾಜ್ ಇದ್ದರು

ಶಾಲೆಯಲ್ಲಿ ಮಕ್ಕಳ ಆಗಮನಕ್ಕೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳು, ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ನಾಗರಾಜ್ ಅವರು ಮಕ್ಕಳು ಮತ್ತು ಪೋಷಕರು ಕೇಂದ್ರಕ್ಕೆ ಉತ್ಸಾಹದಿಂದ ಆಗಮಿಸುತ್ತಿದ್ದು, ಸ್ಥಳೀಯರಿಂದ ಉತ್ತಮ ಸಹಕಾರ ದೊರೆತಿದ್ದು,
ಇಂದು ಜಿಲ್ಲೆಯ ಕೆಪಿಎಸ್ ಶಾಲೆಗಳಲ್ಲಿ ಆರಂಭಗೊಂಡಿದ್ದು ಎಲ್ಲಾ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೋಷಕರು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಹೇಳುತ್ತಾ,ಉಚಿತವಾಗಿ ಬ್ಮಕ್ಕಳಿಗೆ ನೋಟ್ ಪುಸ್ತಕಗಳನ್ನು ನೀಡಿದರು

ಕಾರ್ಯಕ್ರಮದಲ್ಲಿ ಕೆ.ನಾಗರಾಜ್, ಪ್ರಾಂಶುಪಾಲರಾದ ಕೃಷ್ಣನಾಯ್ಕ್, ಮುಖ್ಯಗುರುಗಳಾದ ಎಂ.ಡಿ.ನಾಗೇಶ್, ಬಸವರಾಜ್ ಕಂಕ್ರಿ,ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here