ಮಹಿಳಾ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮ

0
77

ಮಡಿಕೇರಿ ನ.09 :-ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘ ಹಾಗೂ ಸಖಿ ಇನ್ ಸ್ಟಾಪ್ ಸೆಂಟರ್ ಸಂಯುಕ್ತ ಆಶ್ರ್ರಯದಲ್ಲಿ ಮಹಿಳಾ ಸಬಲೀಕರಣ ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ ಹಾಗೂ ಮಹಿಳಾ ಕಾನೂನುಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮವು ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ಮತ್ತು ವೇದಿಕೆಯಲ್ಲಿರುವ ಗಣ್ಯರು ನೆರವೇರಿಸಿದರು. ಉದ್ಘಾಟನಾ ಭಾಷಣದಲ್ಲಿ ಮಹಿಳೆಯರಿಗಾಗಿ ಇರುವ ಹಕ್ಕುಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸಿದರು.
ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎಂ.ಮುದ್ದಣ್ಣ ಅವರು ಮಹಿಳೆಯರಿಗೆ ಇರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಮೀನಾಕುಮಾರಿ, ಹಾಗೂ ಅನುಪಮ ಕಿಶೋರ್ ಮಹಿಳಾ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ, ಹಾಗೂ ಜಿಲ್ಲಾ ಸ್ತ್ರಿಶಕ್ತಿ ಒಕ್ಕೂಟದ ಕಾರ್ಯದರ್ಶಿ ರಜನಿ ಇತರರು ಇದ್ದರು.

LEAVE A REPLY

Please enter your comment!
Please enter your name here