ತೋಟಗಾರಿಕಾ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಿಇಓ ಸೂಚನೆ

0
56

ಹಾಸನ, ನ.17 – ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಸಮಗ್ರ ತೋಟಗಾರಿಕೆ ಶೀಘ್ರವಾಗಿ ಅಭಿವೃದ್ಧಿ ಮಿಷನ್ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣ ಗೊಳಿಸುವಂತೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಎಲ್ಲಾ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳಿಗೆ ಸೂಚಿಸಿದ್ದಾರೆ.

ತೋಟಗಾರಿಕೆ ಇಲಾಖೆ (ಜಿ.ಪಂ) ಹಾಸನ ಉಪ ನಿರ್ದೇಶಕರ ಕಚೇರಿಯಲ್ಲಿ ಇಂದು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ತಾಲ್ಲೂಕುವಾರು ಅಭಿವೃದ್ಧಿ ಮಾಹಿತಿಯನ್ನು ಪರಿಶೀಲಿಸಿ, ಪ್ರಗತಿ ಸಾಧಿಸುವಲ್ಲಿ ಹಿಂದುಳಿದಿರುವತಾಲ್ಲೂಕು ವಾರುಅಧಿಕಾರಿಗಳಿಗೆ ಯೋಜನೆಗಳನ್ನು ಅಭಿವೃದ್ಧಿ ಪಡಿಸುವಂತೆ ಸಲಹೆ ನೀಡಿದರು.
ಹಾಗೂ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ತಾಲ್ಲೂಕುಗಳ ಅಧಿಕಾರಿಗೆ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೆ ಸಂಧರ್ಭದಲ್ಲಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ, ಇದೇ ಮಾಹೆಯಲ್ಲಿ ನಿವೃತ್ತರಾಗುತ್ತಿರುವ ಕಾರಣ ತೋಟಗಾರಿಕೆ ಇಲಾಖೆ ವೃಂದದ ವತಿಯಿಂದ ಸನ್ಮಾನಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಹಾಗೂ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here