ಮಳೆಯಿಂದ ಹಾಳಾದ ಕಾಫಿ ಬೆಳೆ ಸಮೀಕ್ಷೆಗೆ ಸೂಚನೆ

0
670

ಹಾಸನ,ನ.18 :- ಮಳೆಯಿಂದ ಹಾಳಾದ ಕಾಫಿ ಬೆಳಗಾರರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳೆಹಾನಿ ಸಮೀಕ್ಷೆಗೆ ಕ್ರಮ ಕೈಗೊಳ್ಳುವಂತೆ ರೈತರಿಗೆ ಪರಿಹಾರ ಒದಗಿಸುವಂತೆ ಕಾಫಿ ಮಂಡಳಿಯ ಕಾರ್ಯದರ್ಶಿ ಜಗದೀಶ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಮಳೆಯಿಂದಾಗಿ ಅರೇಬಿಕಾ ಕಾಫಿ ಬೆಳೆಯ ಗುಣಮಟ್ಟ ಕಡಿಮೆಯಾಗಿದ್ದು, ಶೇಕಡ 33 ಕ್ಕಿಂತ ಅಧಿಕ ಪ್ರಮಾಣದಲ್ಲಿ ಹಾಳಾಗಿರುವ ಪ್ರದೇಶದಲ್ಲಿ ಕಾಫಿ ಬೋರ್ಡಿನ ಸಿಬ್ಬಂದಿಯ ಜೊತೆಗೆ ಜಿಲ್ಲಾಡಳಿತವು ವಿಶೇಷ ತಂಡವನ್ನು ರಚಿಸಿ ಸಮೀಕ್ಷೆ ನಡೆಸಿ ರೈತರಿಂದ ಅರ್ಜಿಯೊಂದಿಗೆ ಹಾಳಾಗಿರುವ ಬೆಳೆಯ ಫೋಟೋಗಳನ್ನು ಪರಿಹಾರ ಪೋರ್ಟಲ್‍ನಲ್ಲಿ ಸಲ್ಲಿಸುವಂತೆ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಕಾಫಿ ಬೆಳೆ ಸಮೀಕ್ಷೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಮ್, ಕಾಫಿ ಮಂಡಳಿ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾದ ಯೋಗೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here