ವಿಧಾನಪರಿಷತ್ ಚುನಾವಣೆ:ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ವೀಕ್ಷಕರ ಸಭೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕರಿಸಿ:ಡಾ.ರಾಮ್ ಪ್ರಸಾತ್ ಮನೋಹರ್

0
127

ಬಳ್ಳಾರಿ,ನ.26 : ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರತಿನಿಧಿಗಳೊಂದಿಗೆ ಚುನಾವಣಾ ವೀಕ್ಷಕರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚುನಾವಣಾ ವೀಕ್ಷಕ ರಾಮ್ ಪ್ರಸಾತ್ ಮನೋಹರ್ ಅವರು ಈ ವಿಧಾನಪರಿಷತ್ ಚುನಾವಣೆಯನ್ನು ಮುಕ್ತ ಮತ್ತು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಈಗಾಗಲೇ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಹಕರಿಸುವಂತೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಕೋರಿದರು.
ಮತದಾರರು ಅತ್ಯಂತ ನಿರ್ಭೀತಿಯಿದ ಬಂದು ಮತದಾನದ ಮಾಡುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ಯಂತ ಸುಲಲಿತವಾಗಿ ಯಾವುದೇ ರೀತಿಯ ಸಮಸ್ಯೆಗಳಿಗೆ ಅಸ್ಪದ ನೀಡದಂತೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸಿಬ್ಬಂದಿಗಳಿಗೆ ತರಬೇತಿ,ಮತಗಟ್ಟೆಗಳಿಗೆ ಅಗತ್ಯ ಸೌಕರ್ಯ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಸಭೆ-ಸಮಾರಂಭಗಳಿಗೆ ಜಿಲ್ಲಾಡಳಿತದ ವತಿಯಿಂದ ಸಮರ್ಪಕವಾಗಿ ಅನುಮತಿ ನೀಡಲಾಗುತ್ತಿದೆಯೇ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಕೇಳಿದ ವೀಕ್ಷಕ ರಾಮ್ ಪ್ರಸಾತ್ ಅವರು ಚುನಾವಣಾ ಸಂಬಂಧಿತ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ತನ್ನ ಗಮನಕ್ಕೆ ತರುವಂತೆ ಕೋರಿದರು.
ಜಿಲ್ಲಾ ಚುನಾವಣಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಪ್ರತಿ ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಚುನಾವಣೆಯ ಮತದಾದನಕ್ಕೆ ಸಂಬಂಧಿಸಿದಂತೆ ಸ್ವೀಪ್ ಚಟುವಟಿಕೆಗಳನ್ನು ಶೀಘ್ರ ಕೈಗೊಳ್ಳಲಾಗುವುದು ಮತ್ತು ಪ್ರಾಶಸ್ತ್ಯದ ಮತದ ಬಗ್ಗೆಯೂ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ರಾಜಕೀ ಪಕ್ಷಗಳ ಪರವಾಗಿ ಆಗಮಿಸಿದ್ದ ಸಿದ್ದಾರೆಡ್ಡಿ ಪಾಟೀಲ್,ಕೆ.ವಿ.ಆರ್.ಪ್ರಸಾದ್ ಬಾಬು, ಪಕ್ಷೇತರ ಅಭ್ಯರ್ಥಿ ಗಂಗೀರೆಡ್ಡಿ,ಅಪರ ಜಿಲ್ಲಾ ಚುನಾವಣಾಧಿಕಾರಿ ಪಿ.ಎಸ್.ಮಂಜುನಾಥ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here