ಡಾ|| ಬಿ.ಆರ್.ಅಂಬೇಡ್ಕರ್ ಯುವಕರ ಸಂಘ ಹಾಗೂ ಭೀಮ ಆರ್ಮಿ ಸಂಯುಕ್ತ ಆಶ್ರಯದಲ್ಲಿ 72ನೇ ಸಂವಿಧಾನ ಸಮರ್ಪಣಾ

0
118

ಬಳ್ಳಾರಿ : ನಗರದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಯುವಕರ ಸಂಘ (ನೋಂ) ಹಾಗೂ ಭೀಮ ಆರ್ಮಿ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ನಗರದ ಮುಂಡ್ಲೂರು ರಾಮಪ್ಪ ಸಭಾಂಗಣದಲ್ಲಿ 72ನೇ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಬಿ.ಎಸ್.ಪಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಮುನಿಸ್ವಾಮಿ (ವಕೀಲರು) ಭಾರತ ಸಂವಿಧಾನ ರಚನೆಯ ಸ್ವರೂಪವೇ ಎಲ್ಲರನ್ನೂ ಒಳ್ಳಗೊಳ್ಳುವ ಮೌಲ್ಯವನ್ನು ಆಧರಿಸಿದೆ. ಇದು ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಸಂವಿಧಾನ ಜನರ ಆಚಾರ, ವಿಚಾರ, ಸಂಸ್ಕೃತಿ ಅಡ್ಡಿಪಡಿಸುವುದಿಲ್ಲ’ ಎಂದರು.

ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಮುದಾಯಿಕ ಬದುಕಿಗೆ ಧಕ್ಕೆಯಾಗದ ಹಾಗೆ ನಿರ್ವಹಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಎಲ್ಲರಿಗೂ ನೀಡಿದೆ.ಕಾಲದ ಅಗತ್ಯಕ್ಕೆ ತಕ್ಕಂತೆ ತಿದ್ದುಪಡಿ ಮಾಡಿಕೊಳ್ಳುವ ಅವಕಾಶವನ್ನು ಸಂವಿಧಾನ ಒಳಗೊಂಡಿದೆ. ದೇಶದ ಪ್ರಜಾಪ್ರಭುತ್ವ ನಿಂತಿರುವುದು ಸಾಂವಿಧಾನಿಕ ಚೌಕಟ್ಟಿನಲ್ಲಿ ಎಂಬುದನ್ನು ಗ್ರಹಿಸಬೇಕಿದೆ’ ಎಂದರು.

ಇದೇ ಸಂದರ್ಭದಲ್ಲಿ ಶ್ರೀ ಹನುಮೇಶಪ್ಪ , ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷರಾದ ಶ್ರೀ.ಕೆ.ಬಾಬು , ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾದ ಶ್ರೀ ರಾಘವೇಂದ್ರ , ಅಂಬೇಡ್ಕರ್ ಸಂಘದ ಉಪಾಧ್ಯಕ್ಷರಾದ ಓಂಕಾರಿ , ಪ್ರಧನಾಕಾರ್ಯದರ್ಶಿಗಳಾದ ಕೆ.ಜನರ ಬಳಿಕೆ ಮಲ್ಲಿನಾಥ್ ಲಕ್ಷ್ಮಣ. ಎಸ್ ಭಂಡಾರಿ , ಕೆ.ಇ.ಈರೇಶ್ , ಮಂಜುನಾಥ , ತಿಪ್ಪೇಸ್ವಾಮಿ. ಕೆ, ಯುವರಾಜ್ , ರಾಮಾಂಜಿ , ಪರಶುರಾಮ್ ಚಿಗುರು ಕಲಾ ತಂಡದ ಅಧ್ಯಕ್ಷರಾದ ಹುಲುಗಪ್ಪ , ಮಣಿ ಕಂಠ , ಬಸವರಾಜ ಇನ್ನೂ ಹಲವಾರು ಸದಸ್ಯರುಗಳು ಉಪಸ್ಥಿತರಿದ್ದರು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಮಲ್ಲಿನಾಥ್ ರವರು ಪತ್ರಿಕೆ ಪ್ರಕಟಣೆ ತಿಳಿಸಿದರು.

LEAVE A REPLY

Please enter your comment!
Please enter your name here