ಬೆಳೆ ಹಾನಿ ರೈತರ ಖಾತೆಗಳಿಗೆ 2ಕೋಟಿ 31ಲಕ್ಷ ರೂ. ಜಮೆ ಜಿಲ್ಲಾಧಿಕಾರಿ: ಡಾ.ಅವಿನಾಶ್

0
168

ರಾಯಚೂರು,ಡಿ.02 :- ಜಿಲ್ಲೆಯಲ್ಲಿ 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಏಳು ಹಂತಗಳಲ್ಲಿ 1,935 ಫಲಾನುಭವಿಗಳಿಗೆ 2ಕೋಟಿ 31ಲಕ್ಷ ರೂ.ಗಳ ಇನ್‌ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ ಆಧಾರ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮೆ ಮಾಡಲಾಗಿದೆ.

ಜಿಲ್ಲೆಯ ಮುಂಗಾರು ಹಂಗಾಮಿನ ಪ್ರವಾಹ ಅಥವಾ ಅಕಾಲಿಕ ಮಳೆ ಸಂದರ್ಭದಲ್ಲಿ ಬೆಳೆ ಹಾನಿಯಾಗಿರುವ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾAಶದಲ್ಲಿ ದಾಖಲು ಮಾಡಿರುವ ಎಂಟನೇ ಹಂತದ 747 ರೈತರಿಗೆ 87,96,008 ರೂ.ಗಳ (87.96 ಲಕ್ಷ) ಇನ್‌ಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದ್ದು, ಅತೀ ಶೀಘ್ರದಲ್ಲಿ ಸರ್ಕಾರದಿಂದ ನೇರವಾಗಿ ಆಧಾರ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗುವುದು ಮತ್ತು ಬಾಕಿ ಉಳಿದ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾAಶದಲ್ಲಿ ದಾಖಲು ಮಾಡುವ ಪ್ರಕ್ರಿಯೆ ಪ್ರಗತಿ ಹಂತದಲ್ಲಿದ್ದು, ಹಂತ ಹಂತವಾಗಿ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಯಚೂರು,ಡಿ.02,:- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಸುವಿಧಾ ತಂತ್ರಾ0ಶದ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ (ಖeಟಿeತಿಚಿಟ):- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ (ನವೀಕರಣ) ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ 02ನೇ ಕಂತಿಗೆ ಸುವಿಧಾ ತಂತ್ರಾ0ಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬುಹುದು. ಈ ಯೋಜನೆಗೆ ಸಂಬAಧಿಸಿದAತೆ, ಹೆಚ್ಚಿನ ಮಾಹಿತಿಗೆ ಹಾಗೂ ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ hಣಣಠಿs://ಞಚಿಚಿಜ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ:- ಈ ಯೋಜನೆಯಡಿಯಲ್ಲಿ ಸೌಲಭ್ಯ ಬಯಸುವ ಹಿಂದುಳಿದ ವರ್ಗಗಳ ಅಲೆಮಾರಿ / ಅರೆ ಅಲೆಮಾರಿ ಮತ್ತು ಅದರ ಉಪ ಜಾತಿಗಳ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯ, ಸಾಂಪ್ರದಾಯಿಕ ವೃತ್ತಿಗಳು ಮತ್ತು ವೃತ್ತಿ ಕಸುಬುದಾರರಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಾಲ ಮತ್ತು ಸಹಾಯಧನದ ನೆರವು ನೀಡುವುದು.
ಈ ಯೋಜನೆ ಸೌಲಭ್ಯವನ್ನು ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಘಟಕ ವೆಚ್ಚ 1,00,001/- ರೂ. ರಿಂದ 2,00,000/-ರೂ.ಗಳವರೆಗೆ ಶೇ.15ರಷ್ಟು ಕನಿಷ್ಠ 20,000/-ರೂ.ಗಳು ಗರಿಷ್ಠ 30,000/- ರೂ.ಗಳ ಸಹಾಯಧನ, ಉಳಿಕೆ ಶೇ.85ರಷ್ಟು 1,70,000/-ರೂ.ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.
ಗಂಗಾ ಕಲ್ಯಾಣ ನೀರಾವರಿ ಯೋಜನೆ:- ಅಲೆಮಾರಿ / ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‌ಸೆಟ್ ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಘಟಕ ವೆಚ್ಚ 2.50 ಲಕ್ಷ ರೂ.ಗಳಲ್ಲಿ 2.00 ಲಕ್ಷ ರೂ.ಗಳ ಸಹಾಯಧನ ಹಾಗೂ 50,000/- ರೂ.ಗಳ ಶೇ.4ರ ಬಡ್ಡಿದರದಲ್ಲಿ ಸಾಲ. ಪ್ರತಿ ಕೊಳವೆ ಬಾವಿಗೆ 50,000/- ರೂ.ಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು.
ತೆರೆದ ಬಾವಿ ನೀರಾವರಿ ಯೋಜನೆ:- ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಜಿಲ್ಲೆಯಲ್ಲಿ ತೆರೆದ ಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.
ಬ್ಯಾಂಕ್‌ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ:- ಅರ್ಜಿದಾರರು ಕೈಗೊಳ್ಳುವ ವ್ಯಾಪಾರ, ಕೃಷಿ ಮತ್ತು ಕೃಷಿ ಅವಲಂಬಿತ ಚಟುಚಟಿಕೆಗಳು, ಸೇವಾ ಉದ್ದಿಮೆಗಳು, ತಾಂತ್ರಿಕ ಉದ್ದಿಮೆಗಳು ಮತ್ತು ಸಾರಿಗೆ ವಲಯದಲ್ಲಿ ಕೈಗೊಳ್ಳುವ ಆರ್ಥಿಕ ಚಟುವಟಿಕೆಯನುಸಾರವಾಗಿ ಗರಿಷ್ಠ 10.00ಲಕ್ಷ ರೂ.ಗಳವರೆಗೆ ಬ್ಯಾಂಕ್‌ಗಳಿAದ ಸಾಲ ಪಡೆಯುವುದು. ಬ್ಯಾಂಕಗಳು ಮಂಜೂರು ಮಾಡುವ ಸಾಲದ ಮೊತ್ತದಲ್ಲಿ ಶೇ.20ರಷ್ಟು ಅಂದರೆ ಗರಿಷ್ಠ 1.00 ರೂ.ಗಳನ್ನು ನಿಗಮದಿಂದ ಸಹಾಯಧನದ ಮೂಲಕ ಮಂಜೂರು ಮಾಡಲಾಗುವುದು.
ಸ್ವ-ಸಹಾಯ ಗುಂಪುಗಳಿಗೆ ಸಾಲ ಯೋಜನೆ:- ಅಲೆಮಾರಿ / ಅರೆ ಅಲೆಮಾರಿ ಸಮುದಾಯುದ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಮೂಲಕ ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಹಾಗೂ ಸಹಾಯಧವನ್ನು ಒದಗಿಸುವುದು. ಶೇಕಡ 4ರ ಬಡ್ಡಿದರದಲ್ಲಿ ಪ್ರತಿ ಸದಸ್ಯರಿಗೆ ಗರಿಷ್ಠ 15,000/- ರೂ.ಗಳ ಸಾಲ ಮತ್ತು ಗರಿಷ್ಠ 5,000/- ರೂ.ಗಳ ಸಹಾಯಧನ ಸೇರಿ ಪ್ರತಿ ಸದಸ್ಯರಿಗೆ ಗರಿಷ್ಠ 20,000/- ರೂ.ಗಳಂತೆ ಒಂದು ಸ್ವ-ಸಹಾಯ ಗುಂಪಿಗೆ 3,00,000/- ರೂ.ಗಳ ಸಾಲ ನೀಡಲಾಗುತ್ತಿದ್ದು, ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಯೋಜನೆಗಳ ಸೌಲಭ್ಯ ಪಡೆಯಲು ಅರ್ಹತೆಗಳು:- ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ.ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000 ರೂ.ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನೀಡುವುದು.

ಆಸಕ್ತ ಹಿಂದುಳಿದ ವರ್ಗದ ಅರ್ಜಿದಾರರು ನಿಗಮದ ವೆಬ್ ಸೈಟ್ hಣಣಠಿs://ಞಚಿಚಿಜ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಅಥವಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 08532-250440ಗೆ ಸಂಪರ್ಕ ಮಾಡಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

ರಾಯಚೂರು,ಡಿ.02 :- ಇಲ್ಲಿಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (3,4,5 ನೇ ಕಂತುಗಳು) ಸುವಿಧಾ ತಂತ್ರಾಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬುಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ನಿಗಮದ hಣಣಠಿs://ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಯಚೂರು,ಡಿ.02,:- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದಿಂದ ಸವಿತಾ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ 2021-22ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸಾಂಪ್ರದಾಯಿಕ ವೃತ್ತಿದಾರರ ಸಾಲಯೋಜನೆ: ಈ ಯೋಜನೆಯಡಿ ಸವಿತಾ ಸಮಾಜದವರಿಗೆ ಕುಲಕಸುಬು ಅಥವಾ ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಬ್ಯೂಟಿಷಿಯನ್, ಡೋಲು, ವಾದ್ಯ ಮತ್ತು ಬ್ಯಾಂಡ್‌ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳನ್ನು ಕೈಗೊಳ್ಳಲು ಗರಿಷ್ಠ 2ರೂ.ಲಕ್ಷಗಳವರೆಗೆ ಆರ್ಥಿಕ ನೆರವು, ಇದರಲ್ಲಿ ಗರಿಷ್ಠ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ನೀಡಲಾಗುವುದು.
ಸ್ವಯಂ ಉದ್ಯೋಗ ಸಾಲ ಯೋಜನೆ: ಈ ಯೋಜನೆಯಡಿ ಸವಿತಾ ಸಮಾಜದವರಿಗೆ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ, ಮುಂತಾದ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು, ಇದರಲ್ಲಿ ಗರಿಷ್ಠ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರಲ್ಲಿ ಸಾಲ ನೀಡಲಾಗುತ್ತಿದ್ದು, ಸೌಲಭ್ಯ ಪಡೆಯಲು ಬಯಸುವವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000/- ರೂ.ಗಳು ಮತ್ತು ಪಟ್ಟಣ ಪ್ರದೇಶದವರಿಗೆ 1,20,000/- ರೂ.ಗಳ ಒಳಗಿರಬೇಕು ಮತ್ತು ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಅರ್ಜಿಯನ್ನು ನಿಗಮದ ವೆಬ್‌ಸೈಟ್ hಣಣಠಿs://ಞssಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆದು, ಅರ್ಜಿಯೊಂದಿಗೆ ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್‌ಕಾರ್ಡ್ ಜೊಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತಾ ಪುಸ್ತಕದ ಪ್ರತಿ, ಪೋಟೋ ಮತ್ತು ಇತರೆ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಡಿ10ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22374832 ಹಾಗೂ 080-29506174-5, 08532-250440ಗೆ ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿದ್ಯಾರ್ಥಿ ವೇತನ ಶುಲ್ಕ ವಿನಾಯಿತಿಗೆ ಅರ್ಜಿ ಆಹ್ವಾನ

ರಾಯಚೂರು,ಡಿ.02,:- ಇಲ್ಲಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಅಥವಾ ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಶುಲ್ಕ ವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಡಿ.31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್: ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅಥವಾ ದೂರವಾಣಿ ಸಂಖ್ಯೆ: 080-65970004ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಡಿ.11ರಂದು ವಿಕಲಚೇತನರಿಗೆ ಉದ್ಯೋಗ ಮೇಳ

ರಾಯಚೂರು,ಡಿ.02 :- ಬೆಂಗಳೂರಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ವತಿಯಿಚಿದ ಡಿ.11ರ ಬೆಳಿಗ್ಗೆ9.30ಗಂಟೆಗೆ ಬೆಂಗಳೂರಿನ ಮ್ಯಾನ್‌ಫೋ ಬೆಲ್ ಹೋಟೆಲ್ ಹಾಗೂ ಕ್ವೆನ್‌ಷನ್ ಸೆಂಟರ್‌ನಲ್ಲಿ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ರಾಯಚೂರು ಜಿಲ್ಲಾ ವ್ಯಾಪ್ತಿಯ ವಿಕಲಚೇತನರು ಉದ್ಯೋಗ ಮೇಳದ ಅನುಕೂಲವನ್ನು ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ವೀರಭದ್ರಪ್ಪ ಪಾಟೀಲ್ ದೂರವಾಣಿ ಸಂಖ್ಯೆ: 6364867795 ಹಾಗೂ ಸುಭಾಷ್ ಮೊಬೈಲ್ ಸಂಖ್ಯೆ:-9449864693 ಇವರನ್ನು ಸಂಪqðಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಂಜಯ ಕುಮಾರ ಕಾಶಿನಾಥ ಅವರಿಗೆ ಪಿಹೆಚ್.ಡಿ.

ರಾಯಚೂರು,ಡಿ.02 – ಗುಲಬರ್ಗಾ ವಿಶ್ವವಿದ್ಯಾಲಯವು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸಂಜಯ ಕುಮಾರ ಕಾಶಿನಾಥ ಆಯ್ ಇವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ.

ಡಾ.ವ್ಹಿ.ಟಿ.ಕಾಂಬಳೆ ಅವರ ಮಾರ್ಗದರ್ಶನ ಮತ್ತು ಡಾ.ಬಿ.ಪಿ ಮಹೇಶಚಂದ್ರ ಗುರು ಸಹ ಮಾರ್ಗದರ್ಶನದಲ್ಲಿ “ದಿ ಸ್ಟಡಿ ಆಫ್ ಕಮ್ಯುನಿಟಿ ರಿಲೇಷನ್ಸ್ ಸಿಸ್ಟಮ್ ಪ್ರೋಸೆಸ್ ಆ್ಯಂಡ್ ಪ್ರಾಕ್ಟಿಸೆಸ್ ಆಫ್ ಮಾರ್ಡನ್ ಕಾರ್ಪೋರೇಟ್ ಹೌಸೇಸ್ ಇನ್ ಕರ್ನಾಟಕ ಆ್ಯಂಡ್ ಮಹಾರಾಷ್ಟç ಸ್ಟೇಟ್ಸ್” ಕುರಿತು ಸಂಜಯಕುಮಾರ ಕಾಶಿನಾಥ ಆಯ್ ಪ್ರಬಂಧವನ್ನು ಮಂಡಿಸಿದ್ದರು.


ಬಿ.ಇಡಿ: ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು,ಡಿ.02,(ಕ.ವಾ):- ಇಲ್ಲಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಯರಮರಸ್‌ನ ಜಿಲ್ಲಾ ನೋಡಲ್ ಕೇಂದ್ರದಲ್ಲಿ ಎರಡು ವರ್ಷದ ಬಿ.ಇಡಿ ಕೋರ್ಸಿಗೆ ಪ್ರವೇಶ ಪ್ರಕ್ರಿಯೆಯನ್ನು ಡಿ.10ವರೆಗೆ ನಡೆಸಲಾಗುವುದು.

ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಅರ್ಜಿಗಳನ್ನು ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್ ಸೈಟ್ ನೀಡಬಹುದಾಗಿದೆ ಎಂದು ಯರಮರಸ್ ಡಯಟ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ವಿದ್ಯಾಸಿರಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ

ರಾಯಚೂರು,ಡಿ.02,:- ಇಲ್ಲಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ, ಭೌದ್ದರು, ಸಿಖ್ಖರು ಹಾಗೂ ಪಾರ್ಸಿ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸೇವಾ ಸಿಂಧು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.31ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ;-08532-226555. ಸಿಂಧನೂರು-9740871306, ಲಿಂಗಸೂಗೂರು;-9740871306, ಮಾನವಿ;-7411771075, ದೇವದುರ್ಗ;-8904118926ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಅಂಲ್ಪಸAಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಡಿಜಿಟಲ್ ವಿಜ್ಞಾನ ಕೇಂದ್ರ ಸದ್ಬಳಕೆಯಾಗಲಿ ವಿದ್ಯಾರ್ಥಿಗಳಿಗೆ: ಜಿಪಂ ಸಿಇಒ ಸಲಹೆ

ರಾಯಚೂರು,ಡಿ.02,:- ಜಿಲ್ಲೆಯ ಮಸ್ಕಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಗುರುವಾರ ಭೇಟಿ ನೀಡಿ, ಕಾಮಗಾರಿಗಳನ್ನು ಪರಿಶೀಲಿಸಿದರು.

ಹಾಲಾಪುರದಲ್ಲಿ ನಿರ್ಮಾಣ ಹಂತದ ನೂತನ ಗ್ರಾಮ ಪಂಚಾಯತಿ ಕಟ್ಟಡ ಪರಿಶೀಲಿಸಿ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವುದರ ಜತೆಗೆ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಲಾಪುರದ ಪ್ರೌಢಶಾಲೆಯ ಆವರಣದಲ್ಲಿ ನರೇಗಾದಡಿ ನಿರ್ಮಿಸಿದ ಬಾಸ್ಕೆಟ್‌ಬಾಲ್ ಗ್ರೌಂಡ್, ಬಿಸಿಯೂಟದ ಕೋಣೆ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಿಕ್ಷಕರ ಪಾಠ ಆಲಿಸುವುದರ ಜತೆಗೆ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಡಿಜಿಟಲ್ ವಿಜ್ಞಾನ ಕೇಂದ್ರದಲ್ಲಿ ಪ್ರಯೋಗಗಳನ್ನು ಮಾಡಿ ವಿಷಯದಲ್ಲಿ ಪ್ರಭುತ್ವ ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಂತರ ಶಿಕ್ಷಕರ ಹಾಜರಾತಿ ಪುಸ್ತಕ ಜತೆಗೆ ವಿವಿಧ ದಾಖಲಾತಿಗಳನ್ನು ಪರಿಶೀಲಿಸಿದರು. ಅಡವಿಬಾವಿ ತಾಂಡಾದ ಸರ್ಕಾರಿ ಶಾಲೆ ಆವರಣದಲ್ಲಿ ನರೇಗಾದಡಿ ನಿರ್ಮಿಸುತ್ತಿರುವ ಭೋಜನಾಲಯ, ಜೆ.ಜೆ.ಎಂ ಅಡಿ ನಳಗಳ ಸಂಪರ್ಕ ಕಾಮಗಾರಿ, ನೀರಲೂಟಿ ಸರ್ಕಾರಿ ಶಾಲೆಯ ನಿರ್ಮಾಣ ಹಂತದ ಶೌಚಾಗೃಹಗಳನ್ನು ಪರಿಶೀಲಿಸಿದರು. ಮಾರ್ಗ ಮಧ್ಯೆ ಮಾರಲದಿನ್ನಿ-ಅಂಕುಶದೊಡ್ಡಿ ಮಧ್ಯೆ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿದರು.

ಮಸ್ಕಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಥೋಡ್, ಮಸ್ಕಿ ತಾ.ಪಂ ಸಹಾಯಕ ನಿರ್ದೇಶಕರಾದ ಶಿವಾನಂದರೆಡ್ಡಿ, ಪಂಪನಗೌಡ ಪಾಟೀಲ್, ತಾಂತ್ರಿಕ ಸಂಯೋಜಕ ಶಿವಲಿಂಗಯ್ಯ, ಲಿಂಗಸುಗೂರು ತಾಪಂ ಇಒ ಲಕ್ಷೀದೇವಿ ಇತರರು ಉಪಸ್ಥಿತರಿದ್ದರು.


ಬಾಗಲವಾಡ: ನರೇಗಾ ಕಾಮಗಾರಿ ಪರಿಶೀಲಿಸಿದ ಎಡಿ

ರಾಯಚೂರು,ಡಿ.02,- ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಸಿರವಾರ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ಶರ್ಫುನ್ನಿಸಾ ಬೇಗಂ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಬಾಗಲವಾಡ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಶಾಲಾ ಭೋಜನಾಲಯ, ಅಂಗನವಾಡಿ ಕೇಂದ್ರ ಹಾಗೂ ಶಾಲಾ ಶೌಚಾಲಯ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಾಣ ಹಂತದಲ್ಲಿ ಶಾಲಾ ಶೌಚಾಲಯ ಕಾಮಗಾರಿ ಪರಿಶೀಲಿಸಿ, ಗುಣಮಟ್ಟ ಕಾಮಗಾರಿ ನಿರ್ವಹಿಸುವಂತೆ ತಾಂತ್ರಿಕ ಸಂಯೋಜಕರಿಗೆ ನಿರ್ದೇಶನ ನೀಡಿ, ಮುಂದಿನ ಎರಡು ತಿಂಗಳು ಒಳಗಾಗಿ ಬಾಕಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ. ನಂತರ ಬಾಗಲವಾಡ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ತಾಂತ್ರಿಕ ಸಂಯೋಜಕರು, ಸಿಬ್ಬಂದಿ ಇದ್ದರು.

LEAVE A REPLY

Please enter your comment!
Please enter your name here