ಕೋಟ್ಪಾ ಹಾಗೂ ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿ ಅನುಷ್ಠಾನ ಕುರಿತು ತರಬೇತಿ ಕಾರ್ಯಾಗಾರ, ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿ ಕಡ್ಡಾಯ ಅನುಷ್ಠಾನಗೊಳಿಸಿ

0
99

ಬಳ್ಳಾರಿ,ಡಿ.04 : ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಹಯೋಗದಲ್ಲಿ ಬಳ್ಳಾರಿ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಪ್ರಾಂಶುಪಾಲರಿಗೆ ನಗರದ ಸರ್ಕಾರಿ(ಪುರಸಭೆ) ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ 2003 ಮತ್ತು ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ 2003ರ ಸೆಕ್ಷನ್ 6ಬಿ ಅನ್ವಯ ತಂಬಾಕು ಮುಕ್ತ ಕಾಲೇಜುಗಳನ್ನಾಗಿ ಮಾಡಲು ಹಾಗೂ ಪ್ರತಿಯೊಂದು ಶಾಲೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಿ ವಿದ್ಯಾರ್ಥಿಗಳಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದರು.
ಕಾಲೇಜು ಆವರಣದ 100 ಯಾರ್ರ್ಡ್(ಗಜ)ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳು ಮಾರಾಟ ಮಾಡದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಕಾರ್ಯಾಗಾರ ಉದ್ಘಾಟಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಾರದ ರಾಜು.ಎನ್ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಕೋಟ್ಪಾ ಕಾಯ್ದೆ ಮಾರ್ಗಸೂಚಿಯನ್ವಯ ತಂಬಾಕು ಮುಕ್ತ ಕಾಲೇಜುಗಳನ್ನಾಗಿ ಘೋಷಣೆ ಮಾಡಲು ಅಗತ್ಯವಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ತಂಬಾಕು ಮುಕ್ತ ಕಾಲೇಜುಗಳನ್ನಾಗಿ ಘೋಷಣೆ ಮಾಡಲು ಹೆಚ್ಚು ಶ್ರಮವಹಿಸಿ ಕಾಯ್ದೆ ಅನುಷ್ಠಾನಗೊಳಿಸ ಬೇಕೆಂದು ಕರೆ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣಾ ಕೋಶದ ಸಲಹೆಗಾರರಾದ ದುರುಗಪ್ಪ ಎಸ್ ಮಾಚನೂರು ಅವರು ಕೋಟ್ಪಾ-2003 ಕಾಯ್ದೆ ಹಾಗೂ ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಎನ್.ಸಿ.ಡಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಡಾ.ಜಬೀನ್ ತಾಜ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಎನ್.ಸಿಡಿ ಕೋಶದ ಸಿಬ್ಬಂದಿ ಹಾಗೂ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.
ತಂಬಾಕು ವ್ಯಸನ ಮುಕ್ತ ಕೇಂದ್ರದ ಆಪ್ತ ಸಮಾಲೋಚರಾದ ಮಲ್ಲೇಶಪ್ಪ ನಿರೂಪಿಸಿದರು.

LEAVE A REPLY

Please enter your comment!
Please enter your name here