ಡಾ: ಬಿಆರ್. ಅಂಬೇಡ್ಕರ್ ಅವರ ಜೀವನ ಎಲ್ಲರಿಗೂ ಮಾದರಿ : ಡಾ: ರಾಕೇಶ್ ಕುಮಾರ್ ಕೆ

0
109

ರಾಮನಗರ, ಡಿ.06 : ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರು ಪ್ರತಿ ಕ್ಷೇತ್ರದಲ್ಲೂ ತಮ್ಮ ಕೊಡುಗೆ ನೀಡಿದ್ದಾರೆ. ಡಾ: ಬಿ.ಆರ್. ಅಂಬೇಡ್ಕರ್ ಅವರ ಜ್ಞಾನದಿಂದ ಸಂವಿಧಾನ ರೂಪುಗೊಂಡಿದೆ. ಅವರು ಪ್ರತಿಯೊಬ್ಬರ ಜೀವನಕ್ಕೂ ಮಾದರಿ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ: ಬಿ.ಆರ್. ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಡಾ: ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಡಾ: ಬಿ. ಆರ್. ಅಂಬೇಡ್ಕರ್ ಅವರದ್ದು ಪರಿಪೂರ್ಣ ಜೀವನ. ನಾವು ಇಂದು ನಡೆಸುತ್ತಿರುವ ಆಡಳಿತ ಕೂಡ ಡಾ: ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ. ಅವರ ತತ್ವ ಮತ್ತು ಆದರ್ಶವನ್ನು ಎಲ್ಲರೂ ಪರಿಪಾಲಿಸೋಣ ಎಂದರು.

ಡಿಸೆಂಬರ್ ಅಂತ್ಯಕ್ಕೆ ಪ್ರತಿಮೆ ಅನಾವರಣ : ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗವಿರುವ ಎರಡು ಪ್ರತಿಮೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಅನಾವರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆ ನಿರ್ಮಾಣದಲ್ಲಿ 4 ವರ್ಷಗಳ ಪರಿಶ್ರಮವಿದೆ. ಎಲ್ಲರನ್ನೂ ಒಟ್ಟುಗೂಡಿಸಿ ಕಾರ್ಯಕ್ರಮ ಆಯೋಜಿಸೋಣ. ಅದೇ ಡಾ: ಬಿ.ಆರ್.ಅಂಬೇಡ್ಕರ್ ಅವರ ತತ್ವ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಉಪವಿಭಾಗಾಧಿಕಾರಿ ಮಂಜುನಾಥ, ದಲಿತ ಸಂಘಟನೆಗಳ ಮಹಾ ಒಕ್ಕೂಟ ಜಿಲ್ಲಾಧ್ಯಕ್ಷ ಎಂ.ಜಗದೀಶ್, ಅಹಿಂದ ಸಂಘದ ಅಧ್ಯಕ್ಷ ಶೇಖರ್, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಗೋವಿಂದರಾಜು, ಇರುಳಿಗ ಸಮುದಾಯ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ/ ಉಪವಿಭಾಗ ಜಾಗೃತಿ ಸಮಿತಿ‌ ಸದಸ್ಯ ವೆಂಕಟೇಶ್,ರಾಮನಗರಂ ವಾರ್ತೆ ಪತ್ರಿಕೆ ಸಂಪಾದಕ ಚಲುವರಾಜು, ವಾಲ್ಮೀಕಿ ಸಂಘದ ಅಧ್ಯಕ್ಷ ವಾಸು ಹಾಗೂ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here