ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

0
84

ಉಡುಪಿ, ಡಿಸೆಂಬರ್ 6 :ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ನ ದ್ವೆöÊವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಕಾರ್ಯನಿರ್ವಸುವಂತೆ ಎಲ್ಲಾ ಮೈಕ್ರೋ ಅಬ್ಸರ್ವರ್ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ವಿಧಾನಪರಿಷತ್ ಚುನಾವಣಾ ಕರ್ತವಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್ಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತದಾನ ದಿನದಂದು ಮತಗಟ್ಟೆಯಲ್ಲಿ ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳ ಅನ್ವಯ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಬಗ್ಗೆ ಮೈಕ್ರೋ ಅಬ್ಸರ್ವರ್ಗಳು ಪರಿಶೀಲಿಸಬೇಕು. ಯಾವುದೇ ಲೋಪಗಳಿದ್ದಲ್ಲಿ ಮತಗಟ್ಟೆ ಅಧಿಕಾರಿಯ ಗಮನಕ್ಕೆ ತಂದು ಅದನ್ನು ಸರಿಪಡಿಸಬೇಕು. ಮತದಾನವು ಸಂಪೂರ್ಣ ಪಾರದರ್ಶಕ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಮತದಾನದ ಪೂರ್ಣ ವಿವರಗಳನ್ನು ನೇರವಾಗಿ ಜಿಲ್ಲಾ ಚುನಾವಣಾ ವೀಕ್ಷಕರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಮೈಕ್ರೋ ಅಬ್ಸರ್ವರ್ಗಳು ಮತದಾನ ಆರಂಭದಿ0ದ ಮುಕ್ತಾಯದವರೆಗಿನ ಎಲ್ಲಾ ಘಟನೆಯನ್ನು ಸೂಕ್ಷö್ಮವಾಗಿ ಅವಲೋಕಿಸಬೇಕು. ಈ ವರದಿಯನ್ನು ನಿಗಧಿತ ಸಮೂನೆಯಲ್ಲಿ ದಾಖಲಿಸಿ, ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು. ಮತದಾನ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ನೋಡಕೊಳ್ಳಬೇಕು ಎಂದರು.
ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿದಂತೆ ಒಟ್ಟು 2505 ಮಂದಿ ಮತದಾರರು ತಮ್ಮ ಮತ ಚಲಾಯಿಸಲಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದೆ ಎಂದರು.
ಜಿಲ್ಲಾ ನೋಡೆಲ್ ಅಧಿಕಾರಿ ಅಶೋಕ್ ಕಾಮತ್ ಮೈಕ್ರೋ ಅಬ್ಸರ್ವರ್ಗಳು ನಿರ್ವಹಿಸಬೇಕಾದ ಕಾರ್ಯಗಳು ಹಾಗೂ ಸಂಬ0ಧಪಟ್ಟ ದಾಖಲೆಗಳನ್ನು ನಿರ್ವಹಿಸುವ ಕುರಿತು ತರಬೇತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಲೀಡ್ ಬ್ಯಾಂಕ್ ಮೆನೇಜರ್ ಪಿಂಜಾರ, ಎನ್.ಐ.ಸಿ. ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here