ಇರುಳಿಗರ ಕಾಲೋನಿಯಲ್ಲಿ ಕೋವಿಡ್ ಚಾಗೃತಿಗೆ ಚಾಲನೆ : ಗಂಗಾಧರ್,

0
82

ರಾಮನಗರ,ಡಿ.೨೦ :- ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್ ಮತ್ತು ಐ.ಐ.ಹೆಚ್.ಎಂ.ಆರ್. ಸಂಯೋಜಿತ, ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ರಾಮನಗರ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಗ್ಗನಹಳ್ಳಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಾದ ವಿವಿಧ್ ಎಂಟರ್ ಪ್ರೈಸಸ್, ರೋಟರಿ ಸಿಲ್ಕ್ ಸಿಟಿ ರಾಮನಗರ, ಯಲ್ಲೋ ಅಂಡ್ ರೆಡ್ ಫೌಂಡೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ರಾಮದೇವರ ಬೆಟ್ಟದ ತಪ್ಪಲಿನಲ್ಲಿರುವ ಇರುಳಿಗರ ಕಾಲೋನಿಯಲ್ಲಿ ವಿಶೇಷ ಕೋವಿಡ್ ಲಸಿಕೆ ಶಿಬಿರ ಮತ್ತು ನಿಯಂತ್ರಣ ಕುರಿತು ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ ಈ ಗ್ರಾಮದಲ್ಲಿ ಸುಮಾರು ಮಂದಿ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದ ಕಾರಣ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸಿ ಲಸಿಕೆ ನೀಡುವ ವಿಶೇಷವಾಗಿ ಲಸಿಕಾ ಶಿಬಿರವನ್ನು ಆಯೋಜಿಸಿದ್ದು. ಲಸಿಕೆ ಪಡೆಯುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಧೈರ್ಯವಾಗಿ ಲಸಿಕೆ ಪಡೆಯಿರಿ ಲಸಿಕೆ ಪಡೆಯುವುದರಿಂದ ಕೋವಿಡ್‌ನಿಂದ ಸಂಪೂರ್ಣ ರಕ್ಷಣೆ ಪಡೆಯ ಬಹುದು ಇದರ ಪ್ರಯೋಜನವನ್ನು ೧೮ ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳು ಲಸಿಕೆ ಪಡೆಯುವ ಮೂಲಕ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಎಸ್.ಬಿ.ಸಿ ಸಂಯೋಜಕ ಸುರೇಶ್‌ಬಾಬು ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುತ್ತಿದ್ದು ಇದನ್ನು ನಿಯಂತ್ರಿಸ ಬೇಕಾದರೆ ಸಾರ್ವಜನಿಕರು ನಿರಂತರವಾಗಿ ಮುಂಜಾಗೃತ ಕ್ರಮಗಳಾದ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈಗಳ ಸ್ವಚ್ಛತೆ, ಜೊತೆಗೆ ವೈಯಕ್ತಿಕ, ಪರಿಸರ ಸ್ವಚ್ಛತೆ ಕಾಪಾಡಿ ಜೊತೆಗೆ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ವಿಶೇಷವಾಗಿ ೧೮ ವರ್ಷದೊಳಗಿನ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹರಿಸಂದ್ರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಜಯಲಕ್ಷö್ಮಮ್ಮ, ಸದಸ್ಯರಾದ ಚಂದ್ರು, ಜಿಲ್ಲಾ ಸ್ವಚ್ಛ ಭಾರತ್ ಸಂಯೋಜಕ ಸೀನಪ್ಪ, ರೋಟರಿ ಸಿಲ್ಕ್ಸಿಟಿ ಮಾಜಿ ಅಧ್ಯಕ್ಷರಾದ ರವಿಕುಮಾರ್, ವಿವಿಧ್ ಎಂಟರ್ ಪ್ರೆಸಸ್‌ನ ನಾಗೇಂದ್ರ, ಶಿವರಾಜು, ಕಂದಾಯ ಇಲಾಖೆಯ ಅನಿಲ್ ಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಶಾಲಿನ, ಆರೋಗ್ಯ ನಿರೀಕ್ಷಣಾಧಿಕಾರಿ ಮಹದೇವಯ್ಯ, ಅಂಗನವಾಡಿ ಕಾರ್ಯಕರ್ತೆ ಸುಶೀಲಾ, ಆಶಾ ಕಾರ್ಯಕರ್ತೆ ಮಾಲ ಹಾಗೂ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here