ಸರ್ಕಾರದ ಪರಿಹಾರ ಧನ ವಿತರಣೆಯಲ್ಲಿ ಮದ್ಯವರ್ತಿಗಳಿಗೆ ಅವಕಾಶ ನೀಡದೇ ಸಂತ್ರಸ್ತರ ಖಾತೆಗೆ ನೇರ ಜಮೆ ಮಾಡಲಾಗುತ್ತದೆ ; ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

0
113

ಧಾರವಾಡ:ಡಿ.21: ಕೋವಿಡ್ ಸಾಂಕ್ರಾಮಿಕ ರೋಗ, ಅಕಾಲಿಕ ಮಳೆ, ಅತಿ ಮಳೆಯಿಂದ ಉಂಟಾದ ಪ್ರವಾಹ ಹೀಗೆ ವಿವಿಧ ರೀತಿ ನೈಸರ್ಗಿಕ ವಿಕೋಪಗಳಿಂದ ಜಿಲ್ಲೆಯ ಜನ ಸಂಕಷ್ಟಕ್ಕೀಡಾಗಿದ್ದಾರೆ. ಅವರ ನೆರವಿಗೆ ಸರ್ಕಾರ ಸದಾ ಸಿದ್ಧವಿದ್ದು, ಪರಿಹಾರ ವಿತರಣೆಗೆ ತುರ್ತು ಕ್ರಮ ವಹಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ರಾಜ್ಯ ಸರ್ಕಾರಿ ನೌಕರ ಸಂಘದ ಸಭಾಭವನದಲ್ಲಿ ಶಾಸಕ ಅಮೃತ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕೋವಿಡ್ ಸೋಂಕಿನೀದಮ ಮರಣ ಹೊಂದಿದವರ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರದ ಪರಿಹಾರ ಧನದ 1 ಲಕ್ಷ ರೂ.ಗಳ ಚೆಕ್ ಹಾಗೂ ವಿವಿಧ ಇಲಾಖೆಗಳ ಫಲಾನುಭವಿಗಳೀಗೆ ಸರ್ಕಾರಿ ಸವಲತ್ತಗಳನ್ನು ವಿತರಿಸಿ ಮಾತನಾಡಿದರು.

ಇದು ಜನರ ಸರ್ಕಾರ ಜನರೊಂದಿಗೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸದಾ ಇರುತ್ತಾರೆ. ಕೋವಿಡ್ ಕಾರಣದಿಂದ ಅನೇಕರನ್ನು ಕಳೆದುಕೊಂಡಿದ್ದೇವೆ. ಅಕಾಲಿಕ ಮಳೆಯಿಂದ ಕೊಯ್ಲಿಗೆ ಬಂದಿದ್ದ ಬೆಳೆ ಹಾನಿಯಾಗಿದೆ. ಇಂತಹ ಸಂಕಷ್ಟದ ಸಂದಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಬೆನ್ನಿಗೆ ನಿಂತು ಸಹಾಯ ಮಾಡುತ್ತಿವೆ. ಸರ್ಕಾರದ ಪರಿಹಾರ ಧನ ಹಾಗೂ ಸವಲತ್ತುಗಳು ಮದ್ಯವರ್ತಿಗಳಿಲ್ಲದೇ ನೇರವಾಗಿ ಆರ್ಹರ ಬ್ಯಾಂಕ್ ಖಾತೆಗೆ ಜಮೆ ಆಗುವಂತೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಆಸ್ಪತ್ರೆ, ಆಕ್ಸಿಜನ್ ಸೇರಿದಂತೆ ಸಂಭಾವ್ಯ ಅಗತ್ಯಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಜನರು ತಪ್ಪದೇ ಲಸಿಕೆ ಪಡೆಯಬೇಕು. ಮಾಸ್ಕ್ ಧರಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಮೃತ ದೇಸಾಹಿ ಅವರು ಮಾತನಾಡಿ, ಧಾರವಾಡ ಗ್ರಾಮೀಣ ಮತಕ್ಷೇತ್ರದ ಅಭಿವೃದ್ಧಿಗೆ ಜನರ ನೆರವಿಗೆ ಸದಾ ಶ್ರಮಿಸುತ್ತಿದ್ದೇನೆ. ಕೋವಿಡ್ ಅತಿವೃಷ್ಟಿ, ಅಕಾಲಿಕ ಮಳೆಯಿಂದ ಅಭಿವೃದ್ಧಿ ಕಾರ್ಯಗಳೀಗೆ ಸ್ವಲ್ಪ ಮಟ್ಟಿನ ತಡೆ ಆಗಿತ್ತು. ಆದರೂ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿದೆ. ಮನೆ ಹಾನಿಯಾಗಿದ್ದ ಸುಮಾರು 2,500 ಮನೆಗಳಿಗೆ ಪರಿಹಾರ ದೊರಕಿಸಲು ಕ್ರಮ ವಹಿಸಲಾಗಿದೆ. ಬೆಳೆ ಪರಿಹಾರ ಹಂತಹಂತವಾಗಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ. ಬೆಳೆ ವಿಮೆ ಪರಿಹಾರ ನೀಡಲು ಸೂಚಿಸಲಾಗಿದೆ ಎಂದರು.

ಕೋವಿಡ್ 3ನೇ ಅಲೆ ಮುಂದಿನ ದಿನಗಳಲ್ಲಿ ಬರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಆದ್ದರಿಂದ ಕೋವಿಡ್ ಮಹಾಮಾರಿಯಿಮದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದುಕೊಳ್ಳಬೇಕು ಮತ್ತು ಸಾಧ್ಯವಾದಷ್ಟು ಜನ ಜಂಗುಳಿ, ಜನಸಂದಣಿ ಇರುವ ಪ್ರದೇಶದ ಹೊರತಾಗಿದ್ದು, ತಪ್ಪದೇ ಮಾಸ್ಕ್ ಧರಿಸಬೇಕೆಂದು ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪಾಲಿಕೆ ಸದಸ್ಯರಾದ ಶಂಕರ ಶಳಕೆ, ನಿತಿನ್ ಇಂಡಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಫಲಾನುಭವಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ತಹಶೀಲ್ದಾರ ಡಾ.ಸಂತೋಷ ಬಿರಾದಾರ ಕಾರ್ಯಕ್ರಮನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಕುಟುಂಬ ಸದಸ್ಯರಿಗೆ ಪರಿಹಾರ ಧನದ ಚೆಕ್ ಹಾಗೂ ವಿವಿಧ ಇಲಾಖೆಯ ಸರ್ಕಾರಿ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು.

LEAVE A REPLY

Please enter your comment!
Please enter your name here