ಉಪ ಯೋಜನಾ ಕಾರ್ಯಕ್ರಮ ಪ್ರಗತಿ ತಂತ್ರಾಂಶದಲ್ಲಿ ಶೇ.100 ಸಾಧನೆಗೆ ಡಿಸಿ ಸೂಚನೆ

0
88

ಮಡಿಕೇರಿ ಡಿ.22 :-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಿಸಿದಂತೆ ವಿವಿಧ ಅಭಿವೃದ್ಧಿ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ಡಿಪಿಎಂಎಸ್ ತಂತ್ರಾಂಶದಲ್ಲಿ ಅಪ್‍ಡೇಟ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಸಿಎಸ್ಪಿ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಉಪ ಯೋಜನೆಯಡಿ ದೊರೆಯುವ ಸೌಲಭ್ಯಗಳ ಕುರಿತು ಡಿಪಿಎಂಎಸ್ ತಂತ್ರಾಂಶದಲ್ಲಿ ಸಂಬಂಧಪಟ್ಟ ಇಲಾಖೆಗಳು ಕಡ್ಡಾಯವಾಗಿ ಮಾಹಿತಿಯನ್ನು ಅಪ್‍ಡೇಟ್ ಮಾಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಪರಿಶಿಷ್ಟ ಜಾತಿ ಉಪ ಯೋಜನೆಯ ಕಾರ್ಯಕ್ರಮದಡಿಯಲ್ಲಿ ಫಲಾನುಭವಿಗಳನ್ನು ಗುರುತಿಸಿ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ವೈಯಕ್ತಿಕ ಫಲಾನುಭವಿಗಳು ಯೋಜನೆಯ ಉಪಯೋಗ ಪಡೆಯದೇ ಹೋದಲ್ಲಿ ಯೋಜನೆಯನ್ನು ಸಮುದಾಯಗಳು ಪಡೆಯುವಂತಾಗಲು ಅಗತ್ಯ ಮಾಹಿತಿಯನ್ನು ನೀಡುವುದು ಮತ್ತು ಆರ್ಥಿಕ ಮತ್ತು ಭೌತಿಕ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಎಸ್‍ಸಿಎಸ್‍ಪಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳು ಜಿ.ಪಂ.ವ್ಯಾಪ್ತಿಯ ನಿಗಧಿಪಡಿಸಿರುವ ಉಪ ಯೋಜನೆಗೆ ಸಂಬಂಧಪಟ್ಟ ಮಾಹಿತಿ ನೀಡುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಉಪ ಯೋಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಭೌತಿಕ ಮತ್ತು ಆರ್ಥಿಕ ಗುರಿ ಸಾಧನೆ ಮತ್ತು ಮಾಸಿಕ ವರದಿಯ ಬಗ್ಗೆ ವಿವರಿಸಿದರು. ಡಿ.30 ರಂದು ಕೆಸ್ವಾನ್ ಕಾರ್ಯಗಾರ ನಡೆಸಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್ ಅವರು ಮಾಹಿತಿ ನೀಡಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಂಜುಂಡೇಗೌಡ, ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಸುರೇಶ್ ಭಟ್, ಸೆಸ್ಕ್ ಎಇಇ ದೇವಯ್ಯ, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ರವಿಕುಮಾರ್ ಇತರರು ಇದ್ದರು.

LEAVE A REPLY

Please enter your comment!
Please enter your name here