ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ : ಡಾ. ಕುಮಾರ್

0
89

ರಾಮನಗರ, ಡಿ. 22 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ರಾಮನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿಡದಿ ಜ್ಞಾನ ವಿಕಾಸ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ, ಕೋವಿಡ್ ನಿಯಂತ್ರಣ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಮಾತನಾಡುತ್ತಾ ಇದು ವೈರಸ್‌ನಿಂದ ಬರುವ ಖಾಯಿಲೆಯಾಗಿದ್ದು. ದೇಹದ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸಿ ಅರ್ಜಿತ ರೋಗ ಲಕ್ಷಣಗಳ ಕೂಟವನ್ನು ಉಂಟುಮಾಡುತ್ತದೆ. ಇದು ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷಿಸದೇ ಇರುವ ರಕ್ತ ಪಡೆಯುವುದು. ಸೋಂಕಿತ ತಾಯಿಯಿಂದ ಮಗುವಿಗೆ, ಸಂಸ್ಕರಿಸದ ಸೂಜಿ, ಸಿರಂಜ್ ಬಳಕೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಯಲ್ಲಿ ದೀಘÀðಕಾಲದವರೆಗೆ ಕೆಮ್ಮು, ಜ್ವರ, ಭೇದಿ, ತೂಕದಲ್ಲಿ ಶೇ%೧೦ ರಷ್ಟು ಇಳಿಕೆ, ಹಸಿವಾಗದಿರುವುದು, ನಿಶಕ್ತಿ, ಚರ್ಮದ ಸೋಂಕು ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿರುವುದಿಲ್ಲ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಉಚಿತವಾಗಿ ಪರೀಕ್ಷೆಮಾಡಿ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಯುವ ಪೀಳಿಗೆ ಈ ರೋಗಕ್ಕೆ ಹೆಚ್ಚಾಗಿ ಬಲಿಯಾಗುತ್ತಿದ್ದು ಜಾಗೃತರಾಗಬೇಕಿದೆ ಜೊತೆಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಹಕರಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಮಾತನಾಡುತ್ತಾ ಕೋವಿಡ್ – ೧೯ ರ ೩ ಅಲೆ ನಿಯಂತ್ರಿಸ ಬೇಕಾದರೆ ೧೮ ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ೨ ಡೋಸ್ ಲಸಿಕೆ ಪಡೆಯಬೇಕು ಇದರಿಂದ ರೂಪಾಂತರಿ ಓಮೀಕ್ರಾನ್ ನಿಯಂತ್ರಿಸಲು ಸಾಧ್ಯವಾಗುತ್ತದೆ. ಜೊತೆಗೆ ಕೋವಿಡ್ ನಿಯಂತ್ರಿಸ ಬೇಕಾದರೆ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈಗಳ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಸಂಯೋಜಕ ಚಂದ್ರಶೇಖರ್ ಮಾತನಾಡಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಹಾಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಸೇವನೆ ಚಟಕ್ಕೆ ಬಲಿಯಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಜಾಗೃತರಾಗ ಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೂಪ, ಎ.ಬಿ.ಆರ್.ಕೆ ಜಿಲ್ಲಾ ಸಂಯೋಜಕರಾದ ಡಾ. ಸುಷ್ಮಾ, ಎನ್.ಎಸ್.ಎಸ್.ಸಂಯೋಜಕರಾದ ಶರತ್, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್ ಬಾಬು, ರೆಡ್‌ಕ್ರಾಸ್ ಸಂಯೋಜಕರಾದ ರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್, ಆರೋಗ್ಯ ಸಿಬ್ಬಂದಿಗಳಾದ ಬಸವರಾಜು, ಕೃಷ್ಣ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here