ಸ್ವಚ್ಛ-ಸುಂದರ ರಾಮನಗರ ನಮ್ಮೆಲ್ಲರ ಹೊಣೆ: ಇಕ್ರಂ

0
73

ರಾಮನಗರ, ಡಿ. 22 : ಜಿಲ್ಲೆಯನ್ನು ಕಸಮುಕ್ತ ಜಿಲ್ಲೆಯನ್ನಾಗಿ ಮಾಡಿ, ಸ್ವಚ್ಛ-ಸುಂದರ ಗೊಳಿಸುವುದು ನಾಗರೀಕರ ಹೊಣೆಯಾಗಿದ್ದು, ಪ್ರತಿಯೊಬ್ಬರು ಕಸ ಸಂಗ್ರಹಣಗಾರರಿಗೆ ಮನೆಯಲ್ಲಿ ಸಂಗ್ರಹಿಸುವ ಕಸವನ್ನು ನೀಡಿ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರಿಚಕ್ರ ವಾಹನ ಚಾಲಕರು/ ಕಸ ಸಂಗ್ರಹಣಗಾರರು ಹಾಗೂ ನೀರುಗಂಟಿ ಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ಸುರಕ್ಷಿತ ಪರಿಕರಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಚ್ಛತೆ ಕಾಪಾಡುವಲ್ಲಿ ಕಸ ಸಂಗ್ರಹಣಗಾರರ, ತ್ರಿಚಕ್ರ ವಾಹನ ಚಾಲಕರು, ನೀರು ಗುಂಟಿಗಳ ಕೆಲಸ ಪ್ರಮುಖವಾಗಿರುತ್ತದೆ. ಈ ಹಿನ್ನಲೆಯಲ್ಲಿ ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲಸದ ಸಂದರ್ಭದಲ್ಲಿ ನೀಡಲಾಗುವ ಸುರಕ್ಷಾ ಪರಿಕರಗಳನ್ನು ತಪ್ಪದೇ ಉಪಯೋಗಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್ ಅವರು ಮಾತನಾಡಿ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುತ್ತಿದ್ದು ಇದನ್ನು ನಿಯಂತ್ರಿಸ ಬೇಕಾದರೆ ಸಾರ್ವಜನಿಕರು ನಿರಂತರವಾಗಿ ಮುಂಜಾಗೃತ ಕ್ರಮಗಳಾದ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈಗಳ ಸ್ವಚ್ಛತೆ, ಜೊತೆಗೆ ವೈಯಕ್ತಿಕ, ಪರಿಸರ ಸ್ವಚ್ಛತೆ ಕಾಪಾಡಿ ಜೊತೆಗೆ ಪೌಷ್ಠಿಕ ಆಹಾರ ಸೇವನೆ ಮಾಡಬೇಕು. ಲಸಿಕೆ ಪಡೆಯುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಧೈರ್ಯವಾಗಿ ಲಸಿಕೆ ಪಡೆಯಿರಿ. ಲಸಿಕೆ ಪಡೆಯುವುದರಿಂದ ಕೋವಿಡ್‌ನಿಂದ ರಕ್ಷಣೆ ಪಡೆಯ ಬಹುದು ಇದರ ಪ್ರಯೋಜನವನ್ನು ೧೮ ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳು ತಪ್ಪದೇ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್ ಟಿ ಕೆ, ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯ ಹಾಗೂ ಬಿ.ಬಿ.ಎಂ.ಪಿಆರೋಗ್ಯ ಅಧಿಕಾರಿಗಳು ಡಾ: ಸಂಧ್ಯ, ಸಾಹಸ್ ಸಂಸ್ಥೆ ಪ್ರಾಜೆಕ್ಟ್ ಕೋ ಆರ್ಡಿನೇಟರ್ ದೇವಪ್ಪ ಹಾಗೂ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here