ಕೃಷಿ ವಿವಿಯಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ, ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಲಿ: ಯಾದವ್

0
105

ರಾಯಚೂರು,ಡಿ.23 :- ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಹಿಂದುಳಿದ ಜಿಲ್ಲೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹಾತ್ವಕಾಂಕ್ಷಿ ಯೋಜನೆಗೆ ಒಳಪಡಿಸಿದ್ದು, ಸರ್ಕಾರದ ಯೋಜನೆಗಳನ್ನು ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ನೀತಿ ಆಯೋಗದ ಜಂಟಿ ನಿರ್ದೇಶಕ ಸುಬೋದ್ ಯಾದವ್ ಸಲಹೆ ನೀಡಿದರು.

ಅವರು ಡಿ.23ರ ಗುರುವಾರ ದಂದು ನಗರದ ಕೃಷಿ ವಿಶ್ವವಿದ್ಯಾಲಯದ ಕಾನ್ಪರೆನ್ಸ್ ಹಾಲ್‌ನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರೋಗ್ಯ ಕರ್ನಾಟಕ ಯೋಜನೆಯಡಿ ಬಡವರಿಗೆ ಅನುಕೂಲ ಮಾಡಿಕೊಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಡುದಾರರಿಗೆ ಸರಿಯಾದ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ಔಷಧಿಗಳನ್ನು ಎಲ್ಲಾ ರೋಗಿಗಳಿಗೆ ನೀಡುವಂತೆ ಆಗಬೇಕು. ತಾರತಮ್ಯ ಮಾಡಿದರೆ ಇಲಾಖೆಯ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ ಎಂದು ಸೂಚನೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿ ಯೋಜನೆಯನ್ನು ಕಟ್ಟಕಡೆಯ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನಕ್ಕೆ ಅಧಿಕಾರಿಗಳು ಮುಂದಾಗಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯೆ ಸರಿಯಲ್ಲ. ಉದ್ದೇಶಿತ ಯೋಜನೆಗಳು ಅನುಷ್ಠಾನಗೊಳ್ಳದಿರಲು ಕೊರೊನಾ ನೆಪ ಹೇಳುವುದು ಸಮಂಜಸವಲ್ಲವೆAದು ಎಂದು ಹೇಳಿದರು.

ಆಯುಷ್ಮಾನ್ ಕಾರ್ಡ್ ನೋಂದಣಿ ಪ್ರಕ್ರಿಯೆಯಲ್ಲಿ ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ಶೇ.10 ರಷ್ಟು ಈ ಯೋಜನೆಯಡಿ ಚಿಕಿತ್ಸೆ ಪಡೆಯುತ್ತಿದ್ದು, ಗ್ರಾಮೀಣ ಪ್ರದೇಶದ ಪಲಾನುಭವಿಗಳು ವಂಚಿತರಾಗದ0ತೆ ನೋಡಿಕೊಳ್ಳಬೇಕು. ಯಾವುದೇ ಸಮಸ್ಯೆಗಳಿದ್ದರೆ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತರಬೇಕು ಎಂದು ಸಂಬ0ದಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಅವಿನಾಶ ರಾಜೇಂದ್ರ ಮೆನನ್ ಅವರು ಮಾತನಾಡಿ, ಆರೋಗ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಯಡಿ ಲಾಭ ಪಡೆದುಕೊಳ್ಳಲು ಇರುವ ತಾಂತ್ರಿಕ ಹಾಗೂ ಇತರೆ ಸಮಸ್ಯೆ ಇದ್ದಾರೆ ಕೂಡಲೇ ಬಗೆ ಹರಿಸಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಅಸೀಫ್, ಜಿಲ್ಲಾ ಪಂಚಾಯತ್ ಯೋಜನಾ ಅಧಿಕಾರಿ ಮಡೋಳಪ್ಪ ಪಿ.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನಾಗರಾಜ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸುರೇಂದ್ರ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ನಹೀಂ ಹುಸೇನ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯ ಇದ್ದರು.


ರಸ್ತೆಗೆ ನ್ಯಾ.ಶಿವರಾಜ ಪಾಟೀಲ್ ಹೆಸರು ನಾಮಕರಣ: ಆಕ್ಷೇಪಣೆಗೆ ಅರ್ಜಿ ಆಹ್ವಾನ

ರಾಯಚೂರು,ಡಿ.23 :- ಇಲ್ಲಿಯ ಕನಕದಾಸ ವೃತ್ತದಿಂದ ಹೊಸ ಕಾಟನ್ ಮಾರ್ಕೆಟ್ ರೋಡ್‌ಗೆ ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಾದ ಡಾ.ಶಿವರಾಜ್ ವಿ.ಪಾಟೀಲ್ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ನಗರಸಭೆಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ.

ಈ ಹಿನ್ನಲೆಯಲ್ಲಿ ಪ್ರಕಟಣೆ ಪ್ರಕಟಗೊಂಡು ದಿನಾಂಕದಿ0ದ 30 ದಿನಗಳೊಳಗಾಗಿ ಏನಾದರೂ ಆಕ್ಷೇಪಣೆ ಅಥವಾ ತಕರಾರು ಇದ್ದಲ್ಲಿ ಲಿಖಿತವಾಗಿ ನಗರಸಭೆಯ ಕಾರ್ಯಾಲಯಕ್ಕೆ ಸಲ್ಲಿಸತ್ಕದ್ದು. ಒಂದುವೇಳೆ ನಿಗದಿತ ಅವಧಿಯಲ್ಲಿ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿದ್ದಲ್ಲಿ ಕರ್ನಾಟಕ ಮುನಿಸಿಪಲ್ ಕಾಯ್ದೆ 1964 ಕಲಂ 211ರ ಪ್ರಕಾರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸ್ಥಿರಾಸ್ತಿಗಳ ದರಪಟ್ಟಿ÷ಪರಿಷ್ಕೃತ: ಆಕ್ಷೇಪಣೆಗೆ ಅರ್ಜಿ ಆಹ್ವಾನ

ರಾಯಚೂರು,ಡಿ.23:- ತಾಲೂಕಿನಲ್ಲಿ 2021-22ನೇ ಸಾಲಿನ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದ್ದು, ಈ ಪರಿಷ್ಕೃತ ದರಗಳ ಕರಡು ಯಾದಿಯು ಈಗಾಗಲೇ ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪ ಸಮಿತಿ, ತಹಶೀಲ್ದಾರ್, ನಗರಸಭೆಯ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಮಾರ್ಗಸೂಚಿ ದರವು 10%ರಿಂದ 30%ಗಳವರೆಗೆ ಹೆಚ್ಚಿಸಲು ಸಭೆಯಲ್ಲಿ ತಿರ್ಮಾನಿಸಲಾಗಿದ್ದು, ಆಕ್ಷೇಪಣೆಗಳೇನಾದರು ಇದ್ದಲ್ಲಿ ಲಿಖಿತ ರೂಪದಲ್ಲಿ ಪ್ರಕಟಣೆಗೊಂಡ 15 ದಿನಗಳೊಳಗಾಗಿ ಹಿರಿಯ ಉಪನೋಂದಣಾಧಿಕಾರಿ ಮತ್ತು ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪಸಮಿತಿ ಸದಸ್ಯ ಕಾರ್ಯದರ್ಶಿ ಅವರಿಗೆ ಸಲ್ಲಿಸಬಹುದಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನರೇಗಾ ಯೋಜನೆ ಬಗ್ಗೆ ಬಿ.ಎಫ್.ಟಿ, ಕಾಯಕ ಮಿತ್ರರಿಗೆ ತರಬೇತಿ

ರಾಯಚೂರು,ಡಿ.23 :- ಕೂಲಿ ಕಾರ್ಮಿಕರ ಗುಳೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ನರೇಗಾ ಯೋಜನೆ ಜಾರಿಗೊಳಿಸಿದೆ ಎಂದು ಸಿರವಾರ ತಾಲೂಕು ಪಂಚಾಯತಿ ಐಇಸಿ ಸಂಯೋಜಕ ರಾಜೇಂದ್ರ ಕುಮಾರ್ ತಿಳಿಸಿದರು.

ಅವರು ಡಿ.23ರ ಜಿಲ್ಲೆಯ ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ಬಿ.ಎಫ್.ಟಿ ಕಾಯಕ ಮಿತ್ರರು ಹಾಗೂ ಮೇಟಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ನರೇಗಾದಡಿ ಅಂಗನವಾಡಿ, ಶಾಲಾ ಕೊಠಡಿ, ಬಾಸ್ಕೆಟ್ ಬಾಲ್ ಮೈದಾನ ನಿರ್ಮಿಸಿದ್ದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಕೃಷಿ ಹೊಂಡ, ಬದು ನಿರ್ಮಾಣದಿಂದ ಅಂತರ್ಜಲ ಮಟ್ಟ ಹೆಚ್ಚಿದೆ. ಇಂಗುಗುAಡಿ ನಿರ್ಮಾಣದಿಂದ ಬಚ್ಚಲು ನೀರು ರಸ್ತೆಗೆ ಹರಿಯುವುದು ತಪ್ಪಿದೆ. ಶುಚಿತ್ವದ ಜತೆಗೆ ಸಾಂಕ್ರಾಮಿಕ ರೋಗಗಳು ಹತೋಟಿಗೆ ಬಂದಿವೆ ಎಂದರು.

ಸಮುದಾಯ ಕಾಮಗಾರಿಗಳ ಜತೆಗೆ ವೈಯಕ್ತಿಕ ಕಾಮಗಾರಿಗಳಾದ ದನದ ಶೆಡ್, ಕುರಿ ಶೆಡ್ ನಿರ್ಮಿಸಿಕೊಂಡು, ಪಶು ಸಂಗೋಪನೆ ಮೂಲಕ ಆದಾಯ ಪಡೆಯಬಹುದು. ಸಂಪ್ರದಾಯಿಕ ಬೆಳೆಗಳ ಜತೆಗೆ ಪೇರಲ, ನಿಂಬು, ಸಪೋಟ, ಗುಲಾಬಿ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬಹುದು ಎಂದರು. ನರೇಗಾ ಯೋಜನೆಯ 2022-23ನೇ ಸಾಲಿನ ಕಾರ್ಮಿಕರ ಆಯವ್ಯಯ ತಯಾರಿಸುವುದರ ಜತೆಗೆ ಕಾಮಗಾರಿಗಳ ಬೇಡಿಕೆ ಸ್ವೀಕರಿಸಲು ಪ್ರತಿಯೊಂದು ಗ್ರಾ.ಪಂಗಳಲ್ಲಿ ಗ್ರಾಮ ಸಭೆ ಆಯೋಜಿಸಲಾಗುತ್ತಿದೆ. ಕೂಲಿಕಾರರು, ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಬಿ.ಎಫ್.ಟಿ, ಕಾಯಕ ಮಿತ್ರರು ಹಾಗೂ ಮೇಟಿಗಳು ಸೇರಿದಂತೆ ಇತರರು ತರಬೇತಿಯಲ್ಲಿ ಇದ್ದರು.


ದೇವದುರ್ಗ ಪುರಸಭೆ: ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

ರಾಯಚೂರು,ಡಿ.23 :- 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿಯಲ್ಲಿ ದೇವದುರ್ಗ ಪುರಸಭೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳ ಜೀವನೋಪಾ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ ಮೂಲಕ ಸಮೀಕ್ಷೆಯಿಂದ ಹೊರ ಉಳಿದ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳು ಡಿ.31ರೊಳಗಾಗಿ ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ ಅವರಿಗೆ ಸಲ್ಲಿಸಬಹುದಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ದೇವದುರ್ಗ ಪುರಸಭೆ: ಡಿ.28ರಂದು ವ್ಯಾಪಾರಿಗಳಿಗೆ ತರಬೇತಿ

ರಾಯಚೂರು,ಡಿ.23 :- ಡೇ-ನಲ್ಸ್ ಯೋಜನೆಯಡಿಯಲ್ಲಿ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಬೆಂಬಲ ಉಪಘಟಕದಡಿ 2019-20, 2020-21 ಮತ್ತು 2021-22ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅನುಮೋದನೆಗೊಂಡಿರುವ ಭೌತಿಕ ಗುರಿಗೆ ಅನುಗುಣವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಪಟ್ಟಣ ಮಾರಾಟ ಸಮಿತಿಯ ಸದಸ್ಯರುಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಇದೇ ಡಿ.28ರ ಬೆಳಿಗ್ಗೆ 10ಗಂಟೆಗೆ ದೇವದುರ್ಗದ ಪುರಸಭೆ ಕಚೇರಿಯ ಸಭಾಂಗಣದಲ್ಲಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ತರಬೇತಿಗೆ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಪಟ್ಟಣ ಮಾರಾಟ ಸಮಿತಿಯ ಸದಸ್ಯರುಗಳು ಹಾಜರಾಗುವಂತೆ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here