ಗಮನ ಸೆಳೆದ ವಸ್ತು ಪ್ರದರ್ಶನ ಮಳಿಗೆ

0
95

ಮಡಿಕೇರಿ ಡಿ.27:-ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಹೀಗೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಮಳಿಗೆ ಗಮನ ಸೆಳೆಯಿತು.
ಗೌಡ ಸಮಾಜದ ಪ್ರವೇಶ ದ್ವಾರದ ಬಳಿ ನಿರ್ಮಿಸಲಾಗಿದ್ದ ಕೃಷಿ ಇಲಾಖೆ ಮಳಿಗೆ ಜನಾಕರ್ಷಣೀಯವಾಗಿತ್ತು. ವಿವಿಧ ಇಲಾಖೆಗಳು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕರಪತ್ರ, ಬಿತ್ತಿ ಪತ್ರ ಒಳಗೊಂಡ ಮಾಹಿತಿಯನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ, ಆಯುಷ್, ಯುವ ಸಬಲೀಕರಣ ಮತ್ತು ಕ್ರೀಡೆ, ಜವಳಿ ಮತ್ತು ಕೈಮಗ್ಗ, ಕೈಗಾರಿಕೆ, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ, ವಿಕಲಚೇತನರ ಇಲಾಖೆ, ನಗರಸಭೆ, ಆಯುಷ್, ಸಾರ್ವಜನಿಕ ಶಿಕ್ಷಣ, ವಿವಿಧ ಅಭಿವೃದ್ಧಿ ನಿಗಮಗಳು ಹೀಗೆ ಹಲವು ಇಲಾಖೆಗಳು ವಸ್ತು ಪ್ರದರ್ಶನ ಮಳಿಗೆ ಏರ್ಪಡಿಸಿದ್ದು ವಿಶೇಷವಾಗಿತ್ತು.
ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ವಸ್ತು ಪ್ರದರ್ಶನ ಮಳಿಗೆ ವೀಕ್ಷಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಎಲ್ಲೆಡೆ ಇಂತಹ ವಸ್ತು ಪ್ರದರ್ಶನ ಏರ್ಪಡಿಸುವಂತಾಗಬೇಕು. ಸರ್ಕಾರದ ಹಲವು ಅಭಿವೃಧಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿ, ಸರ್ಕಾರದ ಯೋಜನೆಗಳು ಸಫಲವಾಗಬೇಕು ಎಂದರು.

LEAVE A REPLY

Please enter your comment!
Please enter your name here