ಜಿಲ್ಲಾಡಳಿತ ಮತ್ತು ಸಾರಿಗೆ ಕಚೇರಿಯ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ವಾಹನ ತಪಾಸಣಾ ಪ್ರಮಾಣೀಕರಣ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭ

0
104

ಧಾರವಾಡ:ಡಿ.29: ಜಿಲ್ಲಾಡಳಿತ ಮತ್ತು ಸಾರಿಗೆ ಕಚೇರಿಯ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ವಾಹನ ತಪಾಸಣಾ ಪ್ರಮಾಣೀಕರಣ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಜನವರಿ 1, 2022 ರಂದು ಸಂಜೆ 4 ಗಂಟೆಗೆ ರಾಯಾಪುರ ಕೆಐಎಡಿಬಿ ಲೇಔಟ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತರಿರುವರು. ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರು ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ, ರೇಷ್ಮೆ ಮತ್ತು ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರವಿಕುಮಾರ ಸುರಪುರ, ಸಾರಿಗೆ ಮತ್ತು ಸುರಕ್ಷತೆ ಆಯುಕ್ತ ಎನ್. ಶಿವಕುಮಾರ್, ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಭೂರಾಮ, ಧಾರವಾಡ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ .ಬಿ., ಅಪರ ಸಾರಿಗೆ ಆಯುಕ್ತ (ಪ್ರವರ್ತನ -ಉತ್ತರ) ಮಾರುತಿ ಸಾಂಬ್ರಾಣಿ, ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಅಪರ ಸಾರಿಗೆ ಆಯುಕ್ತರು ಹಾಗೂ ಕಾರ್ಯದರ್ಶಿ ಎಲ್. ಹೇಮಂತಕುಮಾರ್, ಅಪರ ಸಾರಿಗೆ ಆಯುಕ್ತ (ಪ್ರವರ್ತನ ದಕ್ಷಿಣ) ಎಲ್.ನರೇಂದ್ರ ಹೊಲ್ಕರ್, ಅಪರ ಸಾರಿಗೆ ಆಯುಕ್ತರು (ಆಡಳಿತ) ಬಿ.ಪಿ., ಉಮಾಶಂಕರ್, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಅಪರ ಸಾರಿಗೆ ಆಯುಕ್ತ ಜೆ. ಜ್ಞಾನೇಂದ್ರಕುಮಾರ್, ಪರಿಸರ ಮತ್ತು ಇ-ಆಡಳಿತ ಅಪರ ಸಾರಿಗೆ ಆಯುಕ್ತ ಜೆ. ಪುರುಷೋತ್ತಮ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.


ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಧಾರವಾಡ ಡಿ.29: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ 2021-22ನೇ ಸಾಲಿಗೆ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನವೆಂಬರ್ 20, 2021 ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿತ್ತು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿಯನ್ನು ಸಲ್ಲಿಸಿರುವ ಪ್ರಯುಕ್ತ ವಿದ್ಯಾರ್ಥಿಗಳ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜನವರಿ 3, 2022 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in ವೆಬ್‍ಸೈಟ್ ಅಥವಾ 8050370006 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ
ವಿಶ್ವಮಾನವ ದಿನ ಆಚರಣೆ

ಧಾರವಾಡ:ಡಿ.29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ನೂತನ ಸಭಾಭವನದಲ್ಲಿ (ಡಿ.29) ಇಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ಅವರ ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯೊಂದಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮವನ್ನು ಕೋವಿಡ್-19ರ ಕಾರಣ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ. ಬಿ., ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ಧನಗೌಡ್ರ, ಪ್ರಧಾನ ಕಾರ್ಯದರ್ಶಿ ಎಸ್. ಬಿ.ಸುಬ್ಬಾಪೂರಮಠ, ಬೇಂದ್ರೆ ಟ್ರಸ್ಟ್ ಅಧ್ಯಕ್ಷರು ಡಾ. ಡಿ. ಎಮ್ ಹಿರೇಮಠ ಹಾಗೂ ಕೆ.ಎಚ್.ನಾಯಕ, ಬಾಳಣ್ಣ ಶಿಗಿಹಳ್ಳಿ, ಶಂಕರ ಕುಂಬಿ ಸೇರಿದಂತೆ ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here